ಸುದ್ದಿಮೂಲ ವಾರ್ತೆ
ಚಾಮರಾಜನಗರ,ಸೆ.27: ಇನ್ನು ಮುಂದೆ ಜೆಡಿಎಸ್ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆಗೆ ಭೇಟಿ ನೀಡಿ ವೇಳೆ ಮಾತನಾಡಿದ, ಸಿಎಂ ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು ಎಂದು ಹೇಳಿದರು.
2004 ರಲ್ಲಿ ಸಿದ್ದರಾಮಯ್ಯರವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದ್ವಾನಿಯವರು ಹಿಂದೆ ಜನತಾ ಪಕ್ಷದಲ್ಲಿ ಇದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ಸ್ಪಷ್ಟನೆ ನೀಡಿದರು.