ಸುದ್ದಿಮೂಲ ವಾರ್ತೆ
ಮೈಸೂರು, ಅ.4 : ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರು ಬುಧವಾರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಕಾಶವಾಣಿ ಸಮೀಪದ ವಿಭಾಗೀಯ ಕಚೇರಿ ಎದುರು ಪ್ರತಿಭಟಿಸಿದರು. ನಂತರ ಇಲಾಖಾ ಆಧೀಕ್ಷರಿಗೆ ಮನವಿ ಪತ್ರ ಸಲ್ಲಿಸಿದರು.
ಬೇಡಿಕೆಗಳು ಏನೇನು ?
8 ಗಂಟೆಗಳ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಬೇಕು. ಸೇವಾ ಹಿರಿತನದ ಆಧಾರದ ಮೇಲೆ 12-24-36 ಸೇವೆ ಸಲ್ಲಿಸಿದ ಜಿಡಿಎಸ್ ನೌಕರರಿಗೆ ವಿಶೇಷ ಬಡ್ತಿ ನೀಡಬೇಕು.
ಅವೈಜ್ಞಾನಿಕ ಗುರಿ ನೀಡಿ ಮೇಳಗಳನ್ನು ನಡೆಸುವುದು. ಗ್ರೂಪ್ ಇನ್ಸುರೆನ್ಸ್ ಕವರೇಜ್ 5ಲಕ್ಷ ರೂ.ವರೆಗೆ ಹೆಚ್ಚಿಸುವುದು. ಅವೈಜ್ಞಾನಿಕ ಗುರಿ ಸಾಧಿಸದಿರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು.
ಜಿಡಿಎಸ್ ಗ್ರಾಚ್ಯುಯಿಟಿ ಹಣವನ್ನು 5ಲಕ್ಷ ರೂ.ವರೆಗೆ ಹೆಚ್ಚಿಸುವುದು. 180 ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು.