ಅ.13: ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಶುಕ್ರವಾರ ಅರಮನೆಯಲ್ಲಿರುವ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಆಹ್ವಾನಿಸಿದರು.