ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.16: ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘ ವಾಲ್ಮೀಕಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿರುವ ಶ್ರೀಮತಿ ಸಾವಿತ್ರಿಬಾಯಿ ಪುಲೆ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅವಧೂತ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಡಾ. ಮಹೇಂದ್ರನಾಥ್ ಶರ್ಮ ಅವರನ್ನು ಆಹ್ವಾನಿಸಲಾಯಿತು.
ಅ.28ರಂದು ಸಂಜೆ 5ಕ್ಕೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನ ಅಕ್ಕಮಹಾದೇವಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘದ ಅಧ್ಯಕ್ಷೆ ಪ್ರೊ.ರತ್ನಾ ವೆಂಕಟೇಶ್ ಅವರು ಮಹೇಂದ್ರನಾಥ್ ಶರ್ಮಾ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಈ ವೇಳೆ ಸಂಘದ ಕಾರ್ಯದರ್ಶಿ ಸುನಿಲ್ ಪ್ರಕಾಶ್ ಅವರು ಸಹ ಹಾಜರಿದ್ದರು.