ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಅ. 16 : ವಿದ್ಯುತ್ ತಂತಿ ತಗುಲಿ ಮಹಿಳೆ ಮೃತಪಟ್ಟಿರುವ ಘಟನೆ ತಾಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.
ಬಸವಪಟ್ಟಣ ಗ್ರಾಮದ ಸುಮಾರು 50 ವರ್ಷದ ಭಾಗ್ಯಮ್ಮ ಎಂಬ ಮಹಿಳೆ ರೇಷ್ಮೆ ಕೃಷಿಯನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದು, ರೇಷ್ಮೆ ಹುಳುಗಳಿಗೆ ಸೋಮವಾರ ಬೆಳಗಿನ ಜಾವ ಹಿಪ್ಪು ನೇರಳೆ ಸೊಪ್ಪು ತರಲು ಅವರ ತೋಟಕ್ಕೆ ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮದ ಹಿರಿಯ ಮುಖಂಡ ಮೀಸೆ ಬೈರೆಗೌಡರವರು ಆರೋಪಿಸಿದ್ದಾರೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.