ಸುದ್ದಿಮೂಲ ವಾರ್ತೆ
ಚಿಂತಾಮಣಿ, ಅ. 17 : ಸದಾ ಕಡತಗಳ ಮಧ್ಯೆ ಮುಳುಗಿರುವ ಕಂದಾಯ ಇಲಾಖೆ ನೌಕರರು ಒತ್ತಡದಿಂದ ಮುಕ್ತರಾಗಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರವೀಂದ್ರ ಹೇಳಿದರು.
ಚಿಂತಾಮಣಿ ತಾಲ್ಲೂಕು ಕಂದಾಯ ನೌಕರರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ನಗರದ ಜಾನ್ಸಿರಾಣಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಕಂದಾಯ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನಂತರ ಮಾತನಾಡಿ, ಪ್ರತಿನಿತ್ಯ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಕಂದಾಯ ಇಲಾಖೆ ನೌಕರರಿಗೆ ತಮ್ಮಲ್ಲಿನ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ದೊರಕುವುದಿಲ್ಲ. ಕಡತಗಳಲ್ಲೇ ಸದಾ ತಲ್ಲೀನರಾಗಿರುವ ಈ ನೌಕರರಿಗೆ ಪ್ರತಿಭೆ ಅನಾವರಣಕ್ಕಾಗಿ ಅವಕಾಶ ಕಲ್ಪಿಸಬೇಕಿದೆ ಎಂದರು.
ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬಹುದಾಗಿದೆ. ಪ್ರತಿಯೊಬ್ಬರು ಆರೋಗ್ಯಕರ ಜೀವನ ನಡೆಸುವಂತಾಗಬೇಕು. ಕ್ರೀಡೆ,ಯೋಗದಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಇದು ಸಾಧ್ಯವಾಗಲಿದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜ. ಕ್ರೀಡಾಸ್ಪೂರ್ತಿಯೊಂದಿಗೆ ಭಾಗವಹಿಸಬೇಕು. ಗೆಲುವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ,ತಾಲೂಕು ದಂಡಾಧಿಕಾರಿಗಳಾದ ಸುದರ್ಶನ್ ಯಾದವ್,ಚಿಕ್ಕಬಳ್ಳಾಪುರ, ಗುಡಿಬಂಡೆ,ಗೌರಿಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟದ ತಾಲೂಕು ದಂಡಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಕಂದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಂದ್ರ,ತಾಲೂಕು ಅಧ್ಯಕ್ಷರಾದ ಗೋಪಾಲಕೃಷ್ಣ ಹಾಜರಿದ್ದರು,