ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಅ. 17 : ದೇಶದ ರಕ್ಷಣೆಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಯೋಧರ ನೆನಪಿನಲ್ಲಿ ‘ನನ್ನ ಮಣ್ಣು ನನ್ನ ದೇಶ’ ಕಳಸ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ,ತಾಲ್ಲೂಕು ಪಂಚಾಯಿತಿ ವತಿಯಿಂದ ಮಂಗಳವಾರದಂದು ಹಮ್ಮಿಕೊಂಡಿದ್ದ ‘ನನ್ನ ಮಣ್ಣು-ನನ್ನ ದೇಶ’ ಅಭಿಯಾನಕ್ಕೆ ಶಾಸಕ ಬಿ.ಎನ್ ರವಿಕುಮಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಚಾಲನೆ ನೀಡಿದರು.
ದೇಶದ ಪ್ರತಿಯೊಬ್ಬ ನಾಗರಿಕರು ದೇಶ ಪ್ರೇಮ ಬೆಳೆಸಿಕೊಂಡು ದೇಶಕ್ಕಾಗಿ ನಿರ್ಮಾಣ ಮಡಿದವರ ಹೆಸರಿನಲ್ಲಿ ಬೃಂದಾವನ ಮಾಡಲು ಗ್ರಾಮೀಣ ಪ್ರದೇಶದಿಂದ ಮಣ್ಣನ್ನು ಸಂಗ್ರಹಿಸಿ ಪ್ರತಿ ತಾಲ್ಲೂಕು, ಜಿಲ್ಲೆಯಿಂದ ಕ್ರೋಢೀಕರಿಸಿ ಜಿಲ್ಲೆಯ ನೆಹರೂ ಯುವ ಕೇಂದ್ರದವರಿಗೆ ಕಳಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜು ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಿಂದ ಅಮೃತ ಕಳಸ ಯಾತ್ರೆಯಲ್ಲಿ ತೆಗೆದುಕೊಂಡು ಬಂದ ಮಣ್ಣನ್ನು ಪ್ರತಿಯೊಬ್ಬ ಯುವಕರು ನಮ್ಮ ದೇಶದ ವೀರ ಯೋಧರನ್ನು ನೆನಪಿಸಿಕೊಂಡು ನಾವೆಲ್ಲರೂ ದೇಶ ಭಕ್ತರಾಗಬೇಕು ಎಂದು ಸಲಹೆ ವಿತರಿಸಿ ನೀಡಿದರು.
ನನ್ನ-ಮಣ್ಣು ನನ್ನ-ದೇಶ ಅಭಿಯಾನ ಮತ್ತು ಹಳ್ಳಿಯಿಂದ ಅಮೃತ ಕಳಶ ಯಾತ್ರೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ನಂತರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿಯಿಂದ ಶೇಖರಿಸಿದ ಕಳಶದ ಮಣ್ಣನ್ನು ಕ್ರೋಢೀಕರಿಸಲಾಯಿತು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ,ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.