ಸುದ್ದಿಮೂಲ ವಾರ್ತೆ
ಬೆಂಗಳೂರು,ಅ.25:ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ರಾಜ್ಯಪಾಲರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು , ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ ವರಾಳೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮಾ,ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.