ಸುದ್ದಿಮೂಲ ವಾರ್ತೆ
ಆನೇಕಲ್,ಅ.27: ಮನೆ ಮುಂದೆ ನಿಲ್ಲಿಸಿದ ಬೈಕ್ ಗಳನ್ನು ಕ್ಷಣ ಮಾತ್ರದಲ್ಲಿ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನ ಆನೇಕಲ್ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಆನೇಕಲ್ ಪಟ್ಟಣದ ಗೌರವನಹಳ್ಳಿ ಮೂಲದ ಆಫ್ರಿದ್ ಆಶ್ರಫ್ ಬಂಧಿತ ಅರೊಪಿ .. ಇನ್ನು ಬಂದಿತ ಆರೋಪಿಯಿಂದ ಆರು ಡಿಯೋ ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಸುಮಾರು 2 ಲಕ್ಷ 40,000 ಮೌಲ್ಯದ ದ್ವಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಮಾರಾಟ ಮಾಡಲು ಯತ್ನ ನಡೆಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆನೇಕಲ್ ಇನ್ಸ್ಪೆಕ್ಟರ್ ಚಂದ್ರಪ್ಪ ನೇತೃತ್ವದಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಇನ್ನು ಆರೋಪಿ ಬಂಧನದ ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಚಂದ್ರಪ್ಪ ಸಬ್ ಇನ್ಸ್ಪೆಕ್ಟರ್ ಪ್ರದೀಪ್ ಸಿಬ್ಬಂದಿಗಳಾದ ಶಂಕರ್ ಸತೀಶ್ ರಂಗನಾಥ್ ಇದ್ದರು .. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ