ಸುದ್ದಿಮೂಲ ವಾರ್ತೆ
ಮೈಸೂರು, ಅ.27:ಗ್ರಾಮೀಣ ಮಹಿಳೆಯರು ಸ್ವಾವಲಂಬನೆ ಸಾಧಿಸಿ ಬದುಕನ್ನು ಸಾಗಿಸುವ ಸದುದ್ದೇಶದಿಂದ ಮೈಸೂರು ಹಾಲು ಒಕ್ಕೂಟ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಹಾಲು ಉತ್ಪಾದಕರ ಸಂಘಗಳನ್ನು ಆರಂಭಿಸಲು ಆದ್ಯತೆ ನೀಡುತ್ತಿದೆ.
ಈ ಹಿನ್ನೆಲೆಯಲ್ಲಿ ತಾಲೂಕಿನ ಜಯಪುರ ಹೋಬಳಿಯ ಟಿ.ಕಾಟೂರು ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆವನ್ನು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರವರು ಉದ್ಘಾಟಿಸಿದರು.
ಜಿಲ್ಲಾ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಕೆ.ಉಮಾಶಂಕರ್,ನಿರ್ದೇಶಕಿ ಲೀಲಾನಾಗರಾಜು, ವಿಸ್ತರಣಾಧಿಕಾರಿಗಳಾ ಸಂತೋಷ್,,ಶಿವಕುಮಾರ್,ಪ್ರವೀಣ್, ,ಸಂಘದ ಅಧ್ಯಕ್ಷರು,ಕಾರ್ಯದರ್ಶಿ ಹಾಗೂ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು.