ಸುದ್ದಿಮೂಲ ವಾರ್ತೆ
ಆನೇಕಲ್, ಅ.29: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಆನೇಕಲ್ ತಹಶಿಲ್ದಾರ್ ಶಿವಪ್ಪ ಲಂಬಾಣಿ ಪಟಾಕಿ ದುರಂತದಲ್ಲಿ ಮೃತಪಟ್ಟ 4 ತಮಿಳುನಾಡಿನ ವಾಣಿಯಂಬಾಡಿ ಯುವಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು.
ತಿರುಪತ್ತೂರು ಜಿಲ್ಲೆಯ ವಾಣಿಯಂಪಾಡಿ ಪಕ್ಕದ ವೆಲ್ಲಕುಟ್ಟೈ ಗ್ರಾಮದ ಸಂತೋಷ್ (23), ನಿತೀಶ್ (22), ರಾಜೇಶ್ (19) ಮತ್ತು ದಿನೇಶ್ (18) ಕುಟುಂಬಗಳಿಗೆ ಪರಿಹಾರ ನೀಡಿದ್ದಾರೆ
ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುವಾಗ ಇದೇ ತಿಂಗಳು 7 ನೇ ತಾರೀಖಿನಂದು ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಕೂಲಿ ಕೆಲಸಕ್ಕೆ ಬಂದಿದ್ದ ಒಟ್ಟು 17 ಮಂದಿ ದುರಂತದಲ್ಲಿ ಮೃತಪಟ್ಟಿದ್ದರು. ಹೀಗಾಗಿ, ಸರ್ಕಾರ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಮೃತರ ಕುಟುಂಬಗಳಿಗೆ 5 ಲಕ್ಷ ಚೆಕ್ ವಿತರಣೆ ಮಾಡಿದರು. ಅಲ್ಲದೆ ಕುಟುಂಬಸ್ಥರ ಜೊತೆಗೆ ಮಾತುಕತೆ ನಡೆಸಿ ಸಾಂತ್ವನ ಹೇಳಲಾಯಿತು.