ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.29: ಅಗ್ನಿ ದುರಂತ ಸಂಭವಿಸಿದ ಹಜ್ ಭವನಕ್ಕೆ ಭಾನುವಾರ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತಾನಾಡಿದ ಅವರು, ಅಗ್ನಿ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಅಗ್ನಿ ದುರಂತದಿಂದ ಹಾನಿಗೀಡಾಗಿರುವ ಸಭಾಂಗಣ ಹಾಗೂ ಗ್ರಂಥಾಲಯ ದುರಸ್ಥಿ ಗೆ ಕ್ರಮ ಕೈಗೊಳ್ಳಲಾಗುವುದು. ಆದಷ್ಟು ಬೇಗ ದುರಸ್ಥಿ ಕಾರ್ಯ ಆರಂಭಿಸಲಾಗುವುದು ಎಂದು ತಿಳಿಸಿದರು.
ಇಲಾಖೆ ನಿರ್ದೇಶಕ ಜಿಲಾನಿ ಮೊಕಾಶಿ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸಾರ್ಫ್ರಾಜ್ ಖಾನ್ ಉಪಸ್ಥಿತರಿದ್ದರು.