ಸುದ್ದಿಮೂಲ ವಾರ್ತೆ
ಬೆಂಗಳೂರು, ನ.07 : ಧರ್ಮ, ಸಂಸ್ಕೃತಿ ಮತ್ತು ಪರೋಪಕಾರದ ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು “ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ಮಾನವ ಸೇವೆ, ಸಮಾಜ ಸೇವೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೆಲಸ ಮಾಡುವವರು ನಮ್ಮೆಲರಿಗೂ ನಿರಂತರವಾಗಿ ಸ್ಫೂರ್ತಿ ನೀಡುತ್ತಿರುತ್ತಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಇಂಟರಾಕ್ಟಿವ್ ಫ್ರೇಮ್ ಆನ್ ಇಂಡಿಯನ್ ಎಕಾನಮಿ ಆಯೋಜಿಸಿದ್ದ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸ್ಥಾನ, ಪ್ರತಿಷ್ಠೆ ಅಥವಾ ದುರಾಸೆಯನ್ನು ಬಯಸದೆ ಇತರರ ಹಿತಾಸಕ್ತಿಗಳನ್ನು ನೋಡಿಕೊಳ್ಳುವ ಮತ್ತು ಇತರರನ್ನು ಗೌರವಿಸುವ ವ್ಯಕ್ತಿ ಉತ್ತಮ ಸಮಾಜ ನಿರ್ಮಾಣಕ್ಕೆ ಸ್ಫೂರ್ತಿಯಾಗುತ್ತಾರೆ. ನಮ್ಮ ದೇಶದಲ್ಲಿ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಸಂಪತ್ತು ಮತ್ತು ವೈಭವವನ್ನು ತ್ಯಾಗ ಮಾಡಿದ್ದಾರೆ ಮತ್ತು ದೇಶ, ಸಮಾಜದ ಕಲ್ಯಾಣಕ್ಕಾಗಿ ಮತ್ತು ಧರ್ಮ ಮತ್ತು ಸಂಸ್ಕೃತಿಯನ್ನು ಬಲಪಡಿಸಲು ಸೇವೆಯನ್ನು ಮಾಡುತ್ತಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳಿಂದ ಪ್ರೇರಣೆ ಪಡೆದು ಮಾನವ ಸೇವೆ, ಸಮಾಜ ಸೇವೆ ಮತ್ತು ದೇಶ ಸೇವೆಯ ಕೆಲಸವನ್ನು ಪರೋಪಕಾರದ ಮನೋಭಾವದಿಂದ ಮಾಡಬೇಕು ಎಂದು ಕರೆ ನೀಡಿದರು.
ಈ ಸಮಾರಂಭದಲ್ಲಿ ಆಯ್ಕೆಯಾದ ಗಣ್ಯರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸದ ವಿಷಯ. ಬದಲಾವಣೆಯು ಪ್ರಕೃತಿಯ ನಿಯಮವಾಗಿದೆ ಮತ್ತು ಸಕಾರಾತ್ಮಕ ಬೆಳವಣಿಗೆಗಾಗಿ ಬದಲಾವಣೆಯು ಸಂಭವಿಸುತ್ತಲೇ ಇರಬೇಕು. ತಮ್ಮ ಪ್ರಯತ್ನದ ಮೂಲಕ ಸಮಾಜದಲ್ಲಿ ಮಹತ್ವದ ಬದಲಾವಣೆಗಳನ್ನು ತರುವಲ್ಲಿ ಯಶಸ್ವಿಯಾದ ಕರ್ನಾಟಕದ ಮಹಾನ್ ವ್ಯಕ್ತಿಗಳನ್ನು ಗೌರವಿಸುವ ಅವಕಾಶ ನನಗೆ ಸಿಕ್ಕಿದೆ. ಈ ಮಹನೀಯರನ್ನು ಅಭಿನಂದಿಸುತ್ತೇನೆ ಹಾಗೂ ನೀವು ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದುವರೆಸಬೇಕು ಎಂದು ಆಶಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣ , ಚಾಂಪಿಯನ್ಸ್ ಆಫ್ ಚೇಂಜ್ ಅವಾರ್ಡ್ ಸಂಸ್ಥಾಪಕ ನಂದನ್ ಝಾ, ಚಾಂಪಿಯನ್ಸ್ ಆಫ್ ಚೇಂಜ್ ಪ್ರಶಸ್ತಿಗಳ ಪೋಷಕ ಶ್ಯಾಮ್ ಜಾಜು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.