ಸುದ್ದಿಮೂಲ ವಾರ್ತೆ
ಮೈಸೂರು, ನ.09:ಇಲ್ಲಿನ ಎನ್.ಆರ್.ಮೊಹಲ್ಲಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದಿರುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ವಿಭಾಗದ ವಿದ್ಯಾರ್ಥಿನಿ ಎಸ್.ನಂದಿತಾಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಮೀಣ ಪ್ರತಿಭೆಯಾಗಿರುವ ಈಕೆ ಒಟ್ಟು 503 ಅಂಕ ಪಡೆದಿದ್ದಾಳೆ. ಕಾಲೇಜಿನ ಪ್ರಾಂಶುಪಾಲ ಹರೀಶ್ವರಪ್ಪ, ತರಬೇತಿ ಅಧಿಕಾರಿ ನಾಗೇಶ್, ಕಿರಿಯ ತರಬೇತಿ ಅಧಿಕಾರಿ ಜಿ.ಎಸ್.ಸುಮತಿ ವಿಧ್ಯಾರ್ಥಿನಿಯನ್ನು ಸನ್ಮಾನಿಸಿದರು.ಈಕೆ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿಯ ಮಂಜುಳಾ ಮತ್ತು ಶಿವನಂಜೇಗೌಡರ ಪುತ್ರಿ.