ದೇವನಹಳ್ಳ, ನ.15: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 49556 ಸಾವಿರ ಹೆಕ್ಟೇರ್ ಪ್ರದೇಶದ ಜಮೀನು ಬೆಲೆ ನಾಶವಾಗಿರುತ್ತದೆ. ಕೇಂದ್ರ ಬರ ಪರಿಶೀಲನೆ ತಂಡಕ್ಕೂ ಮಾಹಿತಿ ನೀಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣ ದಲ್ಲಿ ಬರ ಪರಿಶೀಲನೆ ಬಗ್ಗೆ ಶಾಸಕರ ಉಪಸ್ಥಿತಿಯಲ್ಲಿ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.ಬಳಿಕ ಮಾತನಾಡಿದ ಅವರು, ನಾವು ರೈತರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸಲು ಸಿದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿ ಹೆಚ್ಚಾಗಿ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಟೌನ್ ನಲ್ಲಿ ಬರಪೀಡಿತವಾಗಿದೆ. ಮಳೆ ಸಕಾಲಕ್ಕೆ ಆಗದ ಕಾರಣ ಹಾಗೂ ದೊಡ್ಡ ಮಟ್ಟದ ಪ್ರಮಾಣದಲ್ಲಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ರಾಗಿ ಬೆಳೆ ,ಕಡಲೆ ಕಾಯಿ ಈ ಒಂದು ಬೆಳೆಗಳು ಮಳೆಯನ್ನೇ ಅವಲಂಬಿಸಿ ಬೆಳೆ ತೆಗೆಯಬೇಕಾಗಿರುವುದರಿಂದ ನಾವು ನಿರೀಕ್ಷೆ ಮಾಡಿದಷ್ಟು ಬೆಳೆ ಆಗಿಲ್ಲ ಎಂದರು.
ಸಭೆಯಲ್ಲಿ ಹೊಸಕೋಟೆ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು,ಜಿಲ್ಲಾಧಿಕಾರಿ ಡಾ.ಶಿವಶಂಕರ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾದಿಕಾರಿ ಡಾ.ಅನುರಾಧ ಅಧಿಕಾರಿಗಳು ಉಪಸ್ಥಿತರಿದ್ದರು.