ಸುದ್ದಿಮೂಲ ವಾರ್ತೆ
ಬೆಂಗಳೂರು, ನ.19: ಮಾಜಿ ಪ್ರಧಾನಿಮಂತ್ರಿ, ದಿವಂಗತ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.