ಸುದ್ದಿಮೂಲ ವಾರ್ತೆ
ಆನೇಕಲ್,ನ.29: ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದಲ್ಲಿ ಕಾಡಾನೆಗಳು ಮತ್ತೆ ಹೆಚ್ಚಾಗಿದೆ. ರೈತರು ಬೆಳೆದಿರುವ ಬೆಳೆಗಳನ್ನು ತಿಂದು ಹಾಳು ಮಾಡುತ್ತಿದೆ. ಇನ್ನು ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದ ಜವಳಗೆರೆಯಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡು ಜನರಲ್ಲಿ ಆತಂಕ ಮನೆ ಮಾಡಿದೆ.
ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಜವಳಗೆರೆ ಡೆಂಕಣಿಕೋಟೆ ಶಾಣಮಾವು ಸೇರಿದಂತೆ ನಾನಾ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜವಳಗೆರೆ ತಮಿಳುನಾಡು ಕಾಡು ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಪಟಾಕಿ ಸಿಡಿಸಿ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸಲು ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಅಲ್ಲದೇ, ರೈತರು ಬೆಳೆದಿರುವ ಬೆಳೆಗಳನ್ನು ತಿಂದು ಹಾಳು ಮಾಡುತ್ತಿದೆ. ಕಾಡಾನೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈತರು ಮತ್ತು ಸಾರ್ವಜನಿಕರು ಹೋಡಾಡಲು ಭಯ ಪಡುವಂತೆ ಪರಿಸ್ಥಿತಿ ಎದುರಾಗಿದೆ. ಕಾಡಾನೆಗಳನ್ನು ಕಂಡರೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಅರಣ್ಯ ಅಧಿಕಾರಿಗಳು ಘೋಷಿಸಿದ್ದಾರೆ. ಯಾರು ಕೂಡ ಒಂಟಿಯಾಗಿ ಓಡಾಡದಂತೆ ಸೂಚನೆಯನ್ನು ನೀಡುತ್ತಿದ್ದಾರೆ.