ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮ್ಯ ಅವರು ಗುರುವಾರ ನಗರ ಪ್ರದಕ್ಷಿಣೆ ಕೈಗೊಂಡು ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇನ್ನು ಹೆಬ್ಬಾಳ ಫ್ಲೈ ಓವರ್ ಬಳಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಚ ನೀಡಲು ಕಾರ್ಯಕರ್ತರು, ಫ್ಯಾನ್ಸ್ ಮುಗಿಬಿದ್ದಿದ್ದರು. ಸಿಎಂಗೆ ಬಿಡಿಎ ಅಧ್ಯಕ್ಷ ಹ್ಯಾರೀಸ್, ಬಿಬಿಎಂಪಿ ಮುಖ್ಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು ಸಾಥ್ ನೀಡಿದರು.
ಹೊರವರ್ತುಲ ರಸ್ತೆಯ ಕರಿಯಣ್ಣನ ಪಾಳ್ಯದ ಬಳಿ ಸರ್ವೀಸ್ ರಸ್ತೆಯಲ್ಲಿ ಡಾಂಬರೀಕರಣ ಪರಿಶೀಲನೆ, ಹೆಣ್ಣೂರು ಜಂಕ್ಷನ್ ಬಳಿ ಡಾಂಬರೀಕರಣ ಪರಿಶೀಲನೆ, ಕೆ.ಆರ್ ಪುರ ರೈಲ್ವೆ ನಿಲ್ದಾಣದ ಬಳಿ ಮೆಟ್ರೋ ಕಾಮಗಾರಿ ನಕ್ಷೆಗಳ ವೀಕ್ಷಣೆ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಬಳಿಕ ನಮ್ಮ ಮೆಟ್ರೋ ಏರಿ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದರು.