ಧಿ ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.23:
ರಾಜ್ಯದ ಮಲ್ಟಿಿಪ್ಲೆೆಕ್ಸ್ಗಳಲ್ಲಿ ಏಕರೂಪದ ದರ ನಿಗದಿ ಮಾಡಿದ ರಾಜ್ಯ ಸರ್ಕಾರದ ಕ್ರಮಕ್ಕೆೆ ಹೈಕೋರ್ಟ್ ತಡೆ ನೀಡಿದೆ.
ಸೆಪ್ಟೆೆಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಮಲ್ಟಿಿಪ್ಲೆೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿಿನಲ್ಲಿ ಜಾರಿಗೆ ತಂದಿರುವ ನಿಯಮಗಳ ವಿರುದ್ಧ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿ ಸರ್ಕಾರದ ಆದೇಶಕ್ಕೆೆ ತಡೆ ನೀಡಲಾಗಿದೆ.
ಸರ್ಕಾರದ ನಿರ್ಧಾರ ಪ್ರಶ್ನಿಿಸಿ ಹೊಂಬಾಳೆ ಫಿಲ್ಮ್ಸ್, ಮಲ್ಟಿಿಪ್ಲೆೆಕ್ಸ್ ಅಸೋಸಿಯೇಷನ್ ಆ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್ನ ಷೇರುದಾರ ಸಂತನು ಪೈ, ಕೀಸ್ಟೋೋನ್ ಎಂಟರ್ಟೆಮೆಂಟ್, ವಿ ಕೆ ಫಿಲ್ಮ್ಸ್ ಮತ್ತು ಸಿನಿಪ್ಲೆೆಕ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ಮುಂದಿನ ಆದೇಶದವರೆಗೆ ಈ ತಡೆ ಜಾರಿಯಲ್ಲಿರಲಿದೆ ಎಂದು ಪ್ರಕಟಿಸಿತು.
ಮಲ್ಟಿಿಪ್ಲೆೆಕ್ಸ್ ಅಸೋಸಿಯೇಶನ್ ಆ್ ಇಂಡಿಯಾ ಪರ ಹಿರಿಯ ವಕೀಲ ಮುಕುಲ್ ರೋಹಟ್ಗಿಿ ಅವರು, ಸಿನಿಮಾ ವೀಕ್ಷಕರು ಮತ್ತು ಸಿನಿಮಾ ಪ್ರದರ್ಶಕರ ಆಯ್ಕೆೆಯ ಹಕ್ಕಿಿನ ವಿಚಾರ ಇಲ್ಲಿದೆ. ಈ ಹಿಂದೆ ಸರ್ಕಾರವು ಇಂಥದ್ದೇ ಆದೇಶವನ್ನು ಹಿಂಪಡೆದಿತ್ತು. ಈಗ ಮತ್ತದೇ ಆದೇಶವನ್ನು ಹೊರಡಿಸಲಾಗಿದೆ. 2017ರಲ್ಲಿ ರಾಜ್ಯ ಸರ್ಕಾರ ಇಂಥದ್ದೇ ಆದೇಶ ಮಾಡಿತ್ತು. ಈಗ ನಿಯಮಗಳಿಗೆ ತಿದ್ದುಪಡಿ ಮಾಡಿ ಸಿನಿಮಾ ದರ ನಿಗದಿಪಡಿಸಲಾಗಿದ್ದು, ಇತಿಹಾಸ ಮರುಕಳಿಸಿದೆ ಎಂದಿದ್ದರು.
ಸಿನಿಮಾ ಹಾಲ್ಗಳನ್ನು ರೂಪಿಸಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಇಂತಿಷ್ಟೇ ಸೀಟುಗಳಿಗೆ ಸೀಮಿತಗೊಳಿಸಿ ಅಗತ್ಯ ಸೌಲಭ್ಯಗಳೊಂದಿಗೆ ಸಿನಿಮಾ ಹಾಲ್ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಸರ್ಕಾರವು 200 ರೂಪಾಯಿ ಅಥವಾ ಇಂತಿಷ್ಟೇ ದರಕ್ಕೆೆ ಟಿಕೆಟ್ ಮಾರಾಟ ಮಾಡಬೇಕು ಎಂದು ಹೇಳಲಾಗದು. ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ಅಡಿ ದರ ನಿಗದಿಯು ಕಾನೂನುಬಾಹಿರ ಕ್ರಮವಾಗಿದೆ ಎಂದಿದ್ದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊೊಕೇಟ್ ಜನರಲ್ ಇಸ್ಮಾಾಯಿಲ್ ಜಬೀವುಲ್ಲಾ ಅವರು ಸಾರ್ವಜನಿಕರ ಹಿತದೃಷ್ಟಿಿಯಿಂದ ಟಿಕೆಟ್ ದರ ನಿಗದಿಪಡಿಸಲಾಗಿದೆ. ಇದನ್ನು ಬಜೆಟ್ನಲ್ಲಿ ಸರ್ಕಾರ ಘೋಷಿಸಿತ್ತು. ಸಂವಿಧಾನದ ಅಡಿ ನಿಯಂತ್ರಣ ಕೈಗೊಳ್ಳಲು ಸರ್ಕಾರಕ್ಕೆೆ ಅವಕಾಶವಿದೆ. ಹೀಗಾಗಿ, ಆಕ್ಷೇಪಾರ್ಹವಾದ ಆದೇಶಕ್ಕೆೆ ತಡೆ ನೀಡಬಾರದು ಎಂದು ಕೋರಿದ್ದರು.