ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.28:
ಕಲ್ಯಾಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿಿನ ಪ್ರಮಾಣದ ನೀರನ್ನು ಹೊರಬಿಟ್ಟಿಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆೆತೋರಾದಲ್ಲಿ ಪ್ರವಾಹದ ಪರಿಸ್ಥಿಿತಿ ಉದ್ಭವಿಸಿರುವ ಹಿನ್ನೆೆಲೆಯಲ್ಲಿ ಪರಿಸ್ಥಿಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆೆ ಸೂಚನೆಗಳನ್ನು ನೀಡಬೇಕು. ಗ್ರಾಾಮೀಣಾಭಿವೃದ್ಧಿಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆೆ ಕಲ್ಪಿಿಸುವಂತೆ ಸೂಚಿಸಿದ್ದಾರೆ.
ಪ್ರವಾಹಕ್ಕೆೆ ಕಲಬುರಗಿ ತತ್ತರ:
ಮಳೆ ಆರ್ಭಟ ಮತ್ತು ಮಹಾರಾಷ್ಟ್ರದ ಡ್ಯಾಾಂನಿಂದ ನೀರು ಬಿಟ್ಟಿಿದ್ದರಿಂದ ಭೀಮಾ ನದಿ ಅಪಾಯ ಮಟ್ಟ ಮೀರಿದ್ದರಿಂದ ಪ್ರವಾಹ ಪರಿಸ್ಥಿಿತಿ ಉಂಟಾಗಿದೆ. ಜಿಲ್ಲೆಯ ಹಲವು ಗ್ರಾಾಮಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅಜಲಪುರ ಮತ್ತು ಜೇವರ್ಗಿ ತಾಲೂಕಿನಲ್ಲಿ ಭೀಮಾ ಆರ್ಭಟ ಕ್ಷಣ ಕ್ಷಣಕ್ಕೂ ಹೆಚ್ಚಾಾಗುತ್ತಿಿದ್ದು, ಪ್ರವಾಹ ಪರಿಸ್ಥಿಿತಿ ಮತ್ತಷ್ಟು ಬಿಗಡಾಯಿಸಿದೆ. ಗಾಣಗಾಪುರದ ಬಳಿ ಇರುವ ಇಟಗಾ-ಗಾಣಗಾಪುರ ಮತ್ತು ಘತ್ತರಗಿ ಸೇತುವೆ ಮುಳುಗಡೆಯಾಗಿದೆ. ಮಣ್ಣೂರು ಗ್ರಾಾಮದ ಬಳಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಎಸ್ಡಿಿಆರ್ಎ್ ಸಿಬ್ಬಂದಿ ಬೋಟ್ ಮೂಲಕ ಕಾಳಜಿ ಕೇಂದ್ರಕ್ಕೆೆ ಸ್ಥಳಾಂತರಿಸಿದ್ದಾರೆ.
ಕಾಳಜಿ ಕೇಂದ್ರಗಳ ಸ್ಥಾಾಪನೆ: ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 36 ಗ್ರಾಾಮಗಳು ಸಂಪೂರ್ಣ ಪ್ರವಾಹಪೀಡಿತವಾಗಿವೆ. ಇವುಗಳಲ್ಲಿ ಅಜಲ್ಪುರ ತಾಲೂಕಿನ 17, ಜೇವರ್ಗಿ ತಾಲೂಕಿನ 8 ಹಾಗೂ ಕಲಬುರಗಿ ಮತ್ತು ಚಿತ್ತಾಾಪುರ ತಾಲೂಕಿನಲ್ಲಿ ತಲಾ 5 ಗ್ರಾಾಮಗಳು ಸೇರಿವೆ. ಜಿಲ್ಲೆಯಲ್ಲಿ 31 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈಗಾಗಲೇ ಒಟ್ಟು 12 ಕಾಳಜಿ ಕೇಂದ್ರಗಳನ್ನು ತೆಗೆಯಲಾಗಿದೆ. ಒಟ್ಟು 1,436 ಜನರಿಗೆ ಈ ಕಾಳಜಿ ಕೇಂದ್ರಗಳಲ್ಲಿ ವಾಸಕ್ಕೆೆ ವ್ಯವಸ್ಥೆೆ ಮಾಡಲಾಗಿದೆ.
ಪರಿಹಾರ ತಂಡಗಳ ನಿಯೋಜನೆ: ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು 20 ಅಧಿಕಾರಿಗಳನ್ನೊೊಳಗೊಂಡ ಪರಿಣತ 1 ಎನ್ಡಿಿಆರ್ಎ್ ತಂಡವನ್ನು ದೇವಲಗಾಣಗಾಪುರಲ್ಲಿ ಇರಿಸಲಾಗಿದೆ. ಪೊಲೀಸ್ ಇಲಾಖೆ, ಅಗ್ನಿಿಶಾಮಕ ದಳ, ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳನ್ನು ಸೇವೆಗೆ ನಿಯೋಜಿಸಲಾಗಿದೆ.
ವಿಶೇಷ ಪ್ಯಾಾಕೇಜ್ ಈಶ್ವರ ಖಂಡ್ರೆೆ ಮನವಿ
ಬೀದರ್ ನಲ್ಲಿ ವಾರದಿಂದ ಸುರಿಯುತ್ತಿಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಾಕೇಜ್ ನೀಡುವಂತೆ ಮುಖ್ಯಮಂತ್ರಿಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆೆ ಮನವಿ ಮಾಡಿದ್ದಾರೆ.
ಭಾನುವಾರ ರಾತ್ರಿಿ ಸಚಿವ ರಹೀಂಖಾನ್ ಜೊತೆಯಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ ಬಳಿಕ ಮಾತನಾಡಿದ ಸಚಿವರು ತಮ್ಮ ಮನವಿಗೆ ಮುಖ್ಯಮಂತ್ರಿಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. 3 ದಿನಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದರು.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮವಾಗಿ ಋತುಮಾನಗಳಲ್ಲಿ ಏರುಪೇರಾಗುತ್ತಿಿದ್ದು, ಇದರ ಪರಿಣಾಮ ಗಡಿ ಜಿಲ್ಲೆ ಬೀದರ್ ಮೇಲೂ ಆಗುತ್ತಿಿದೆ. ಹೆಚ್ಚಿಿನ ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಇಲ್ಲದ ನಮ್ಮ ಜಿಲ್ಲೆಯ ಶೇ.75ರಷ್ಟು ಜನರ ಬದುಕು ಕೃಷಿಯನ್ನೇ ಅವಲಂಬಿಸಿದ್ದು, ಈ ವರ್ಷ 4.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದೆ. ಆದರೆ, ಆಗಸ್ಟ್ ತಿಂಗಳಲ್ಲೇ ಸುರಿದ ಅನಿರೀಕ್ಷಿತ ಪ್ರಮಾಣದ ಮಳೆಯಿಂದ ಶೇ.25ರಷ್ಟು ಬೆಳೆ ನಷ್ಟವಾಗಿತ್ತು. ಈಗ ಸೆಪ್ಟೆೆಂಬರ್ನಲ್ಲಿ ಮತ್ತೆೆ ವಿಪರೀತ ಮಳೆ ಸುರಿಯುತ್ತಿಿದ್ದು, ಕೊಯ್ಲಿಿಗೆ ಬಂದ ಹೆಸರು, ಉದ್ದು, ತೊಗರಿ, ಸೋಯಾ ಸೇರಿದಂತೆ ಎಲ್ಲ ಬೆಳೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ನಮ್ಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆೆ ಸಿಲುಕಿದ್ದಾರೆ ಎಂದು ಈಶ್ವರ ಖಂಡ್ರೆೆ ಮುಖ್ಯಮಂತ್ರಿಿಗಳಿಗೆ ಮಾಹಿತಿ ನೀಡಿದರು..
ಒಂದು ವಾರದ ಅವಧಿಯಲ್ಲಿ ಒಂದು ತಿಂಗಳ ಮಳೆ ಬೀಳುತ್ತಿಿರುವ ಪರಿಣಾಮ, ಹಲವು ಸೇತುವೆಗಳು ಕುಸಿದು ಸಂಪರ್ಕ ಕಡಿತವಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿ ಅನೇಕ ಗ್ರಾಾಮಗಳು ವಿದ್ಯುತ್ ಇಲ್ಲದೆ ಅಂಧಕಾರದಲ್ಲಿ ಮುಳುಗಿವೆ. ಭಾರೀ ಮಳೆಗೆ ಶಾಲಾ ಕೊಠಡಿ, ಅಂಗನವಾಡಿ ಕಟ್ಟಡ, ಆಸ್ಪತ್ರೆೆ, ಸರ್ಕಾರಿ ಕಚೇರಿಗಳೂ ಸೋರುವಂತಾಗಿದೆ. ಪ್ರವಾಹದಿಂದಾಗಿ ಲವತ್ತಾಾದ ಮಣ್ಣು ಕೊಚ್ಚಿಿ ಹೋಗಿದ್ದು, ಭೂಮಿ ಸವಳು ಜವಳಾಗಿದೆ. ರೈತರ ಬಗ್ಗೆೆ ಅಪಾರ ಕಾಳಜಿ ಹೊಂದಿರುವ ತಾವು, ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ತುರ್ತು ಪರಿಹಾರ ಹಾಗೂ ವಿಶೇಷ ಪ್ಯಾಾಕೇಜ್ ಘೋಷಿಸಬೇಕು ಎಂದು ವಿನಂತಿ ಮಾಡಿದ್ದಾಗಿ ಇದಕ್ಕೆೆ ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದೂ ತಿಳಿಸಿದರು.

