ಸುದ್ದಿಮೂಲ ವಾರ್ತೆ ರಾಯಚೂರು, ಸೆ.28:
ಜಿಲ್ಲೆಯಲ್ಲೆ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿಿರುವ ಹಿನ್ನೆೆಲೆಯಲ್ಲಿ ಮುಂಜಾಗ್ರತೆ ವಹಿಸಲು ಮತ್ತು ಬೆಳೆ ಹಾನಿ ಸಮೀಕ್ಷೆ ನಡೆಸಲು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಏನ್. ಎಸ್. ಬೋಸರಾಜು ಸೂಚನೆ ನೀಡಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಾಧಿಕಾರದ ಅಧ್ಯಕ್ಷರು ಆಗಿರುವ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರೊಂದಿಗೆ ಮಾತನಾಡಿ ಜಿಲ್ಲೆಯ ವಿವಿಧೆಡೆ ಬಹುತೇಕ ಎಲ್ಲಾ ಕಡೆ ವಿಪರೀತವಾಗಿ ಮಳೆ ಸುರಿದಿದೆ. ತೀವ್ರ ಮಳೆಯಿಂದಾಗಿ ಜಿಲ್ಲಾ ವ್ಯಾಾಪ್ತಿಿಯ ಬಹುತೇಕ ಎಲ್ಲಾ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿಿವೆ. ಮಳೆಯಿಂದಾಗಿ ಜಮೀನುಗಳಲ್ಲಿ ನೀರು ನಿಂತು ಬೆಳೆಹಾನಿ ಆಗಿದೆ ಜಿಲ್ಲೆಯಲ್ಲಿ ಕೂಡಲೇ ಸಮೀಕ್ಷೆ ಆರಂಭಿಸಿ ಕೃಷಿ ಸೇರಿದಂತೆ, ರಸ್ತೆೆ ಸೇರಿ ಎಲ್ಲ ಮೂಲ ಭೂತ ಸೌಲಭ್ಯ ಕಲ್ಪಿಿಸಲು ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ನಿರ್ದೇಶನ ನೀಡಲು ಸೂಚನೆ ನೀಡಿರುವುದಾಗಿ ಅವರು ಸುದ್ದಿಮೂಲಕ್ಕೆೆ ತಿಳಿಸಿದರು.
ಜಿಲ್ಲೆಯಲ್ಲಿ ಹತ್ತಿಿ, ಭತ್ತ, ತೊಗರಿ, ಜೋಳ ಸೇರಿದಂತೆ ಈಗ ಬಿತ್ತನೆಯಾದ ಎಲ್ಲ ಬೆಳೆಗಳ ಹಾನಿಯ ಸಮೀಕ್ಷೆ ಜೊತೆಗೆ. ತೋಟಗಾರಿಕಾ ಬೆಳೆಹಾನಿಯ ಸಮೀಕ್ಷೆ ಕೂಡ ಜೊತೆ ಜೊತೆಗೆ ನಡೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜಂಟಿ ಸಮೀಕ್ಷೆಗೆ ಬಳಿಕ ಜಾನುವಾರು-ಜೀವಹಾನಿ ಹಾಗೂ ಮನೆ, ಬೆಳೆ ಹಾನಿಗೆ ಕಾಲಮಿತಿಯೊಳಗೆ ಪರಿಹಾರ ಸಿಗುವಂತೆ ತುರ್ತು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.