ಸುದ್ದಿಮೂಲ ವಾರ್ತೆ ಹೊಸಪೇಟೆ, ಸೆ.28:
ಜಿಲ್ಲೆಯಲ್ಲಿ ಮುಂಗಾರಿನಿಂದಲೂ ಉತ್ತಮ ಮಳೆಯಾಗುತ್ತಿಿದ್ದು, ನಿ ರಂತರ ಮಳೆಯಿಂದ ರೈತರ ಬೆಳೆ ನಷ್ಟವಾಗಿದೆ. ಅದರಲ್ಲಿ ಈರುಳ್ಳಿಿ ಬೆಳೆ ಹಡಗಲಿ ಮತ್ತು ಹರಪನಹಳ್ಳಿಿ ತಾಲೂಕಿನಲ್ಲಿ ಹೆಚ್ಚಿಿನ ನಷ್ಟವಾಗಿದ್ದು ರೈತರು ಕಂಗಲಾಗಿದ್ದಾರೆ ಎಂದು ಕೃಷ್ಣನಾಯ್ಕ ಮತ್ತು ಎಂ.ಪಿ.ಲತಾ ಮಲ್ಲಿಕಾರ್ಜುನ ಪ್ರಸ್ತಾಾಪಿಸಿದರು. ಇದಕ್ಕೆೆ ಸಚಿವರು ನಿಖರವಾದ ಅಂಕಿ ಅಂಶಗಳನ್ನು ಸಂಗ್ರಹಿಸಲು ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿದರು.
ನೀಟ್ ಪ್ರವೇಶಕ್ಕೆೆ ಯುಡಿಐಡಿ ಸುಳ್ಳು ದಾಖಲೆ ಸೃಷ್ಟಿಿ : ಬೆಂಗಳೂರಿನವರು ಹಗರಿಬೊಮ್ಮನಹಳ್ಳಿಿ ವಿಳಾಸದಲ್ಲಿ ಆಧಾರ್ ಬದಲಿಸಿ ಮೆಡಿಕಲ್ ಸೀಟ್ ಪಡೆಯಲು ಆರೋಗ್ಯ ಇಲಾಖೆ ಕ್ಲಾಾರ್ಕ್ ಮತ್ತು ವೈದ್ಯರು ಸೇರಿ ಸುಳ್ಳು ದಾಖಲೆ ಸೃಷ್ಟಿಿಸಿ ಅಂಗವಿಕಲರ ಪ್ರಮಾಣ ಪತ್ರ ವಿತರಣೆ ಮಾಡಿದ ಬಗ್ಗೆೆ ವರದಿಯಾಗಿದೆ. ಈ ಬಗ್ಗೆೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಹಿಂದೆ ದೊಡ್ಡ ಜಾಲವಿದ್ದು, ತಪ್ಪಿಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಚಿವರು ಸೂಚಿಸಿದರು. ಇದಕ್ಕೆೆ ಪೂರಕ ಮಾಹಿತಿ ನೀಡಿದ ಡಿಎಚ್ಒ ಈಗಾಗಲೇ ವೈದ್ಯರು ಮತ್ತು ಸಿಬ್ಬಂದಿಗೆ ನೊಟೀಸ್ ನೀಡಲಾಗಿದೆ. ಸರ್ಕಾರಕ್ಕೆೆ 206 ಪುಟಗಳ ವರದಿ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

