ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.28:
ತೀವ್ರ ಮಳೆಯಿಂದ ಹಾನಿಯಾಗಿರುವ ರಾಜ್ಯದ ಜಿಲ್ಲೆಗಳಿಗೆ ಭೇಟಿ ನೀಡಲು ಬಿಜೆಪಿ ಎರಡು ತಂಡಗಳನ್ನು ನಿಯೋಜನೆ ಮಾಡಿದೆ.
ಬಿಜೆಪಿ ನಾಯಕರ ತಂಡ ಜಿಲ್ಲೆಗಳಿಗೆ ಪ್ರವಾಸ ಮಾಡಿ ಅತೀವೃಷ್ಟಿಿ ಹಾಗೂ ಅನಾವೃಷ್ಟಿಿ ಬಗ್ಗೆೆ ಅಧ್ಯಯನ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಪ್ರವಾಸದ ವೇಳೆ ತಂಡದ ಸದಸ್ಯರು ಬೆಳೆ ಹಾನಿಗೊಳಗಾದ ರೈತರನ್ನು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ.
ಯಾರು ಯಾವ ಜಿಲ್ಲೆಗೆ ಭೇಟಿ, ಬಿ.ವೈ.ವಿಜಯೇಂದ್ರ ನೇತೃತ್ವದ ಮೊದಲ ತಂಡ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ಜಿಲ್ಲೆಗೆ ಭೇಟಿ ನೀಡಲಿದೆ. ತಂಡದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಾಮಿ, ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಮಾಜಿ ಸಚಿವ ಶ್ರೀರಾಮುಲು, ಮಾಜಿ ಸಂಸದ ಡಾ.ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯೆೆ ಭಾರತೀಶೆಟ್ಟಿಿ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿಿ ಅವರು ತಂಡದಲ್ಲಿದ್ದಾರೆ.
ಎರಡನೇ ತಂಡದ ನೇತೃತ್ವವನ್ನು ವಿಪಕ್ಷ ನಾಯಕ ಆರ್. ಅಶೋಕ್ ವಹಿಸಿದ್ದು ಈ ತಂಡದಲ್ಲಿ ಸಂಸದ ಜಗದೀಶ್ ಶೆಟ್ಟರ್, ಶಾಸಕರಾದ ಸಿ.ಟಿ.ರವಿ, ಅರವಿಂದ ಬೆಲ್ಲದ್, ಸಂಸದ ರಮೇಶ್ ಜಿಗಜಿಣಗಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕಿ ಶಶಿಕಲಾ ಜೊಲ್ಲೆ, ಶಾಸಕರಾದ ಸಿದ್ದು ಸವದಿ, ಅಭಯ್ ಪಾಟೀಲ್ ಇದ್ದಾರೆ.

