ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.30:
ಬೆಂಗಳೂರಿನಲ್ಲಿ ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡುವುದಲ್ಲ. ಸೋಮಾರಿತನ ಬಿಟ್ಟು ತಕ್ಷಣವೇ ಕಲ್ಯಾಾಣ ಕರ್ನಾಟಕಕ್ಕೆೆ ನೆರೆ ಪರಿಹಾರ ಪ್ಯಾಾಕೇಜ್ ಘೋಷಣೆ ಮಾಡಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋೋಶ ವ್ಯಕ್ತಪಡಿಸಿದರು.
ನವದೆಹಲಿಯಲ್ಲಿ ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಿಯಲ್ಲಿ ಮಾತನಾಡಿದ ಸಚಿವರು; ಕಲ್ಯಾಾಣ ಕರ್ನಾಟಕದಲ್ಲಿ ನೆರೆ ಸಂಕಷ್ಟದಲ್ಲಿ ಜನರಿದ್ದರೆ ರಾಜ್ಯದಲ್ಲಿರುವ ಸರಕಾರ ಕುಂಭಕರ್ಣ ನಿದ್ರೆೆಯಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿಿ ಸೇರಿ ಸಂಪುಟದ 36 ಸಚಿವರಿಗೆ ಇವತ್ತು ಜ್ಞಾನೋದಯವಾಗಿದೆ. ಅಷ್ಟೂ ಸಚಿವರು ಇಲ್ಲಿವರೆಗೆ ಏನು ಮಾಡುತ್ತಿಿದ್ದರು? ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಂದ ಸರಕಾರದ ವಿರುದ್ಧ ಟೀಕೆಗಳು ಶುರುವಾದ ಮೇಲೆ ಮುಖ್ಯಮಂತ್ರಿಿಗಳು ನೆರೆಪೀಡಿತ ಜಿಲ್ಲೆಗಳಿಗೆ ತೆರಳಿ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಆದರೆ, ನೆರೆ ಪ್ರತಿ ವರ್ಷದ ಸಮಸ್ಯೆೆ. ಕಳೆದ 3 ತಿಂಗಳಿಂದ ಈ ಸರಕಾರ ಗಾಢ ನಿದ್ರೆೆಯಲ್ಲಿತ್ತು ಎಂದು ಕುಮಾರಸ್ವಾಾಮಿ ಅವರು ಕಿಡಿಕಾರಿದರು.
ಸಿಎಂ ಹೇಳಿಕೆ ಬಗ್ಗೆೆ ನಿರಾಶೆ ಆಗಿದೆ:
ಪರಿಹಾರಕ್ಕೆೆ ಒತ್ತಾಾಯ ಮಾಡುತ್ತಿಿರುವ ಪ್ರತಿಪಕ್ಷಗಳ ಬಗ್ಗೆೆ ಮುಖ್ಯಮಂತ್ರಿಿ ನೀಡುತ್ತಿಿರುವ ಉತ್ತರ, ಹೇಳಿಕೆಗಳನ್ನು ನೋಡಿದರೆ ನಿರಾಶೆಯಾಗುತ್ತದೆ. ಪ್ರತಿಪಕ್ಷವನ್ನು ಬೈದರೆ ನೆರೆ ಸಂತ್ರಸ್ತರ ಸಮಸ್ಯೆೆ ನೀಗುತ್ತದೆಯೇ? ಅವರ ಹೇಳಿಕೆಗಳು ಅವರು ಅಲಂಕರಿಸುವ ಹುದ್ದೆಗೆ ತಕ್ಕುದಾಗಿಲ್ಲ. ಸಂಪುಟದಲ್ಲಿ 36 ಜನ ಮಂತ್ರಿಿಗಳಿದ್ದಾರೆ. ಅವರೆಲ್ಲರೂ ಎಲ್ಲಿ ಹೋಗಿದ್ದಾರೆ? ಎಸಿ ರೂಂಗಳಲ್ಲಿ ಕೂತು ಕಾಲಹರಣ ಮಾಡಿದ್ದು ಸಾಕು ಎಂದು ಗುಡುಗಿದ ಅವರು; ಮೊದಲು ಜಡತ್ವ ಬಿಟ್ಟು ಪ್ರತೀ ಜಿಲ್ಲೆಗೂ ಇಬ್ಬರು-ಮೂವರು ಮಂತ್ರಿಿಗಳನ್ನು ಕಳಿಸಿ. ವಿಶೇಷ ತಂಡಗಳನ್ನು ನಿಯೋಜಿಸಿ. ಸಚಿವರು ಕನಿಷ್ಠ 3 ದಿನ ಜಿಲ್ಲೆಗಳಲ್ಲಿಯೇ ಮೊಕ್ಕಂ ಹೂಡಲಿ. ಮೊದಲು ಜನರ ಬಳಿಗೆ ಹೋಗಿ ಅವರ ಕಷ್ಟಕ್ಕೆೆ ಮಿಡಿಯಲಿ ಎಂದು ಒತ್ತಾಾಯಿಸಿದರು.
ನನಗೆ ಆರೋಗ್ಯ ಸಮಸ್ಯೆೆ ಇಲ್ಲದೇ ಇದ್ದಿದ್ದರೆ ನೆರೆಪೀಡಿತ ಪ್ರದೇಶಗಳಲ್ಲಿ ಕನಿಷ್ಠ ಒಂದು ವಾರ ಕಾಳವಾದರೂ ಕ್ಯಾಾಂಪ್ ಮಾಡುತ್ತಿಿದ್ದೆ. ಇನ್ನೊೊಂದು ಕಡೆ 2 ದಿನಗಳ ಹಿಂದೆಯೇ ನಾನು ನೆರೆ ಪ್ರದೇಶಗಳಿಗೆ ಹೋಗಲು ಸಿದ್ದವಾಗಿದ್ದೆ. ಹವಾಮಾನ ಸರಿ ಇಲ್ಲದ ಕಾರಣ ಅಧಿಕಾರಿಗಳು ಬರಬೇಡಿ ಎಂದರು. ಪ್ರವಾಹ ಬಂದು ಎರಡುಮೂರು ದಿನಗಳು ಆದ ಮೇಲೆ ಮಂತ್ರಿಿಗಳು ಕಾಟಾಚಾರಕ್ಕೆೆ ಭೇಟಿ ನೀಡಿದ್ದಾರೆ. ಹೀಗೆ ಮಾಡಿದರೆ ಹೇಗೆ? ಎಂದು ಕುಮಾರಸ್ವಾಾಮಿ ಅವರು ರಾಜ್ಯ ಸರಕಾರವನ್ನು ಪ್ರಶ್ನೆೆ ಮಾಡಿದರು.
ಪದೇಪದೆ ಕೇಂದ್ರ ಸರಕಾರದ ಜೊತೆ ಘರ್ಷಣೆ ಮಾಡಿಕೊಳ್ಳಬೇಡಿ. ಅದರಿಂದ ಉಪಯೋಗ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಾಸ ಇಡಿ. ಸರಿಯಾದ ರೀತಿಯಲ್ಲಿ ಮನವಿ ಕೊಟ್ಟು ಪರಿಹಾರ ಕೇಳಿದರೆ ಕೇಂದ್ರದ ನೆರವು ಸಿಗುತ್ತದೆ. ಮೊದಲು ಒರಟು ಮಾತು ಬಿಡಿ. ಈವರೆಗೂ ರಾಜ್ಯದ ಒಬ್ಬ ಸಚಿವ ಅಥವಾ ಅಧಿಕಾರಿ ರಾಜ್ಯವನ್ನು ಪ್ರತಿನಿಧಿಸುತ್ತಿಿರುವ ಕೇಂದ್ರ ಸಚಿವರನ್ನು ಭೇಟಿ ಮಾಡಿಲ್ಲ ಎಂದು ಅವರು ಹರಿಹಾಯ್ದರು.

