ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.30:
ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿಿದ್ದಾರೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ ನಡೆಸುವ ಷಡ್ಯಂತ್ರ ಹೊಸತಲ್ಲ. ಈ ಹಿಂದೆ ನನ್ನ ತಂಗಿ, ತಮ್ಮ ಸೇರಿದಂತೆ ಎಲ್ಲರ ಮೇಲೂ ಪ್ರಯತ್ನ ಮಾಡಿದ್ದರು. ಇದಕ್ಕೆೆ ಕೊನೆ ಹಾಡಬೇಕು. ಈಗಲೂ ಅದನ್ನೇ ಮುಂದುವರಿಸುತ್ತಿಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿಿರ ಬರುತ್ತಿಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.
ಜೈಲಿಗೆ ಹಾಕುವ ಅಧಿಕಾರ ಇರುವುದು ನ್ಯಾಾಯಾಧೀಶರಿಗೆ ಮಾತ್ರ. ನನ್ನ ವಿಚಾರದಲ್ಲಿ ಅವರೇ ನ್ಯಾಾಯಾಧೀಶರಂತೆ ಮಾತನಾಡುತ್ತಿಿದ್ದಾರೆ. ನ್ಯಾಾಯಧೀಶರಂತೆ ವರ್ತಿಸುತ್ತಿಿರುವ ಅವರೂ ಕೂಡ ನ್ಯಾಾಯಾಲಯಕ್ಕೆೆ ಹೋಗುತ್ತಿಿದ್ದಾರೆ ಎಂದು ವ್ಯಂಗ್ಯವಾಡಿದರು.
ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿಿದ್ದಾರೆ. ಇದಕ್ಕೆೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಿಸಲಿ. ನಾನು, ಕುಮಾರಸ್ವಾಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ
ನೆರೆ ಪರಿಹಾರ ಸೇರಿದಂತೆ ರಾಜ್ಯಕ್ಕೆೆ ಹೆಚ್ಚಿಿನ ಪರಿಹಾರ ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಜೊತೆ ವಿಶ್ವಾಾಸ ಬೆಳೆಸಿಕೊಳ್ಳಬೇಕು ಎಂಬ ಕುಮಾರಸ್ವಾಾಮಿ ಅವರ ಸಲಹೆ ಬಗ್ಗೆೆ ಕೇಳಿದಾಗ, ಕುಮಾರಸ್ವಾಾಮಿ ಅವರು ಕೇಂದ್ರದ ಸಚಿವರು. ಅವರ ನೇತೃತ್ವದಲ್ಲೇ, ನಾಯಕತ್ವದಲ್ಲೇ ರಾಜ್ಯದ ನಿಯೋಗ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿಿಗಳ ಬಳಿ ಹೋಗಲು ಸಿದ್ಧ. ಅವರು ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದಲ್ಲಿ ಕೈಗಾರಿಕೆ ಸ್ಥಾಾಪಿಸಿ ಉದ್ಯೋೋಗ ಸೃಷ್ಟಿಿಸುವುದಾಗಿ ಹೇಳಿದ್ದಾರೆ. ನಮ್ಮ ಸಹಕಾರ ಕೇಳಿದ್ದಾರೆ. ಅವರು ಎಲ್ಲಿ ಕೈಗಾರಿಕೆ ಸ್ಥಾಾಪಿಸಲು ಮುಂದಾಗುತ್ತಾಾರೋ ಸಂಪೂರ್ಣ ಸಹಕಾರ ನೀಡಲು ನಮ್ಮ ಸರ್ಕಾರ ಸಿದ್ಧ. ಅಥವಾ ಅವರ ಮಗ ಹೇಳಿದಂತೆ ಅವರದೇ ಜಮೀನಿನಲ್ಲಿ ಕೈಗಾರಿಕೆ ಮಾಡಿದರೂ ಅನುಮತಿ ನೀಡುತ್ತೇವೆ ಎಂದು ತಿಳಿಸಿದರು.
ಬಿಡದಿ ಟೌನ್ ಶಿಪ್ ಮಾಡುತ್ತಿಿರುವುದು ರಿಯಲ್ ಎಸ್ಟೇಟ್ಗಾಗಿ ಎಂಬ ಆರೋಪದ ಕುರಿತು ಪ್ರತಿಕ್ರಿಿಯಿಸಿ, ರಿಯಲ್ ಎಸ್ಟೇಟ್ ಬಗ್ಗೆೆ ಅವರಿಂದ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾನು ಬೆಂಗಳೂರಿನವನು ನನ್ನ ಆಸ್ತಿಿ ಬೆಂಗಳೂರು ಜಿಲ್ಲೆಯಲ್ಲೇ ಇದೆ. ನಾನು ಹೊರಗಿನಿಂದ ಬಂದು ಜಮೀನು ತೆಗೆದುಕೊಂಡಿಲ್ಲ ಎಂದು ಹರಿಹಾಯ್ದರು.
ಗಾಯಕ ಜುಬಿನ ಶ್ರದ್ಧಾಾಂಜಲಿ ಸಭೆಯಲ್ಲಿ ಭಾಗಿ:
ದೇಶದ ಪ್ರಖ್ಯಾಾತ ಸಂಗೀತ ಸಂಯೋಜಕರು, 40 ಭಾಷೆಗಳಲ್ಲಿ ಹಾಡಿರುವ ಗಾಯಕರು, 12 ವಾದ್ಯಗಳನ್ನು ನುಡಿಸಬಲ್ಲ ಕಲಾವಿದರಾದ ಅಸ್ಸಾಾಂನ ಜುಬಿನ್ ಗಾರ್ಗ್ ಅವರ ಆಕಸ್ಮಿಿಕ ನಿಧನ ಹಿನ್ನೆೆಲೆಯಲ್ಲಿ ಅವರ ಆತ್ಮಕ್ಕೆೆ ಶಾಂತಿ ಸಿಗಲಿ ಎಂದು ಪಕ್ಷದ ಪರವಾಗಿ ಪ್ರಾಾರ್ಥಿಸುತ್ತೇನೆ. ಪಕ್ಷದ ಸೂಚನೆ ಮೇರೆಗೆ ನಾನು ಬುಧವಾರ ಅವರ ಶ್ರದ್ಧಾಾಂಜಲಿ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿಿದ್ದೇನೆ. ಚಿಕ್ಕ ವಯಸ್ಸಿಿನಲ್ಲಿ ಅನೇಕ ಸಾಧನೆ ಮಾಡಿರುವ ಮಹಾನ್ ಕಲಾವಿದರು ನಮ್ಮನ್ನು ಅಗಲಿದ್ದಾರೆ. ಅವರಿಗೆ ಗೌರವ ನೀಡಲಾಗುವುದು ಎಂದು ತಿಳಿಸಿದರು.