ಸುದ್ದಿಮೂಲ ವಾರ್ತೆ ರಾಯಚೂರು, ಅ.04:
ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯ ಮೂಲಕ ಕಟ್ಟಕಡೆಯ ವ್ಯಕ್ತಿಿಗೂ ಸರ್ಕಾರದ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶ ಈಡೇರಿಸಲು, ಸ್ವಯಂಪ್ರೇೇರಿತವಾಗಿ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವರ ನಿವಾಸದಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳಿಗೆ ಸ್ವವಿವರ ಸಲ್ಲಿಸಿದ ಅವರು ಸಮೀಕ್ಷೆಯಲ್ಲಿ ಭಾಗವಹಿಸಿದರು.
ಈ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಸಮೀಕ್ಷೆಯಿಂದ ಜನರ ವಾಸ್ತವ ಪರಸ್ಥಿಿತಿ ತಿಳಿಯಲಿದೆ. ವಾಸ್ತ ಪರಿಸ್ಥಿಿತಿಗೆ ಅನುಗುಣವಾಗಿ ಸಮೀಕ್ಷೆಯ ವರದಿಯಾದರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದರು
ಈಗಾಗಲೆ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ 50% ಮುಕ್ತಾಾಯವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ತಾಂತ್ರಿಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಸಮೀಕ್ಷೆ ಮುಗಿಸಬೇಕಾಗಿದೆ ಎಂದು ಸಲಹೆ ಮಾಡಿದರು.
*ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಸಚಿವ ಎನ್.ಎಸ್ .ಬೋಸರಾಜು ಭಾಗಿ *ಸಮೀಕ್ಷೆಯಲ್ಲಿ ಸ್ವಯಂ ವಿವರ ಸಲ್ಲಿಸಿದ ಎನ್.ಎಸ್ .ಬೋಸರಾಜು ಜನರ ವಾಸ್ತವ ಪರಸ್ಥಿಿತಿ ಅರಿಯಲು ಸಮೀಕ್ಷೆ ಅಗತ್ಯ

