ಸುದ್ದಿಮೂಲ ವಾರ್ತೆ ವಿಜಯಪುರ, ಅ.04:
ಉತ್ತರ ಕರ್ನಾಟಕ ಮತ್ತು ಕಲ್ಯಾಾಣ ಕರ್ನಾಟಕದಲ್ಲಿನ ಮಳೆ ಹಾನಿ ಬಗ್ಗೆೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಿರಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿಿದೆ. ಆದರೆ ಕಾಂಗ್ರೆೆಸ್ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ದೂರಿದರು.
ಮುಖ್ಯಮಂತ್ರಿಿ ಹಾಗೂ ಸಚಿವರು ಸ್ಥಳಕ್ಕೆೆ ಭೇಟಿ ಮಾಡಿ ಸಮಸ್ಯೆೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಸಚಿವರು ಎಲ್ಲಿದ್ದಾರೆಂದು ಹುಡುಕಿಕೊಡಿ ಎಂದು ರೈತರು ದೂರಿದ್ದಾರೆ. ಜಿಲ್ಲಾಧಿಕಾರಿಗಳು ಬಂದು ಸರ್ವೆ ಮಾಡಿಲ್ಲ. ಕಾಂಗ್ರೆೆಸ್ ನಾಯಕರು ಈಗ ಯಾರ ಪರ ಎಂದು ಸವಾಲು ಹಾಕಲಿ. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಾಯಿ ಸಿಎಂ ಆಗಿದ್ದಾಗ ಕೊಟ್ಟಿಿದ್ದಕ್ಕಿಿಂತ ಹೆಚ್ಚಿಿನ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ನೀಡಲಿ ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ಬೇಕಿದ್ದರೆ ಸರ್ವಪಕ್ಷ ಸಭೆ ಕರೆಯಲಿ. ಅದರಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ. ದೆಹಲಿಗೆ ಹೋಗುವುದಾದರೆ ನಾವು ಕೂಡ ಬರುತ್ತೇವೆ. ಈರುಳ್ಳಿಿ ಬೆಳೆ ಹಾಳಾಗಿದೆ. ಹತ್ತಿಿ ನೀರಿನಲ್ಲಿ ನೆನೆದಿದೆ. ಬಿಜೆಪಿ ಅವಧಿಯಲ್ಲಿ ಮನೆ ಹಾನಿಗೆ 5 ಲಕ್ಷ ರೂ. ನೀಡಿದರೆ ಈಗಿನ ಸರ್ಕಾರ 1.20 ಲಕ್ಷ ರೂ. ನೀಡುತ್ತಿಿದೆ. ಉಳಿದ ಹಣ ಯಾರ ಜೇಬಿಗೆ ಹೋಗುತ್ತಿಿದೆ ಎಂದು ತಿಳಿದಿಲ್ಲ. ಸರ್ಕಾರ ಐದಲ್ಲ, ಐವತ್ತು ಗ್ಯಾಾರಂಟಿಗಳನ್ನು ನೀಡಲಿ. ಆದರೆ ಆ ಹೆಸರಲ್ಲಿ ಪರಿಹಾರ ನೀಡದೇ ಇರುವುದರಿಂದ ರೈತರು ಆತ್ಮಹತ್ಯೆೆ ಮಾಡಿಕೊಳ್ಳುತ್ತಿಿದ್ದಾರೆ. ಪ್ರತಿ ಎಕರೆಗೆ 25,000 ರೂ. ಪರಿಹಾರ ಹಾಗೂ ಮನೆ ಕಟ್ಟಿಿಸಲು 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್ನಷ್ಟು ಜಮೀನಿನಲ್ಲಿ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆಯಲ್ಲಿ 52,000 ಸಾವಿರ ಹೆಕ್ಟೇರ್ನಷ್ಟು ಜಮೀನಿನಲ್ಲಿ ಬೆಳೆ ಹಾನಿಯಾಗಿದೆ. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆೆ ಇಲ್ಲ. ಸರ್ಕಾರದಿಂದ ಪರಿಹಾರ ಸಿಕ್ಕಿಿದ್ದರೆ ಇಬ್ಬರು ರೈತರು ಆತ್ಮಹತ್ಯೆೆ ಮಾಡಿಕೊಳ್ಳುತ್ತಿಿರಲಿಲ್ಲ, ನಾವ್ಯಾಾರೂ ಬಂದು ಪರಿಶೀಲನೆ ಮಾಡುತ್ತಿಿರಲಿಲ್ಲ. ಕಬ್ಬು, ತೊಗರಿ, ಹತ್ತಿಿ ಬೆಳೆಗಳಲ್ಲಿ ಮಳೆ ನೀರು ಹಾಗೆಯೇ ನಿಂತು ಹಾಳಾಗಿದೆ. ಬಿಜೆಪಿ ವತಿಯಿಂದ ಎರಡು ದಿನಗಳಿಂದ ಪರಿಶೀಲನೆ ಮಾಡಲಾಗುತ್ತಿಿದೆ. ಆದರೆ ಸರ್ಕಾರದಿಂದ ವೈಮಾನಿಕ ಸಮೀಕ್ಷೆ ಮಾಡಲಾಗುತ್ತಿಿದೆ. ಎಲ್ಲರೂ ಆಕಾಶದಲ್ಲೇ ಇದ್ದಾರೆ. ಯಾರೂ ರೈತರ ಬಳಿ ಬರುತ್ತಿಿಲ್ಲ ಎಂದು ಆಕ್ರೋೋಶ ವ್ಯಕ್ತಪಡಿಸಿದರು.

