ಸುದ್ದಿಮೂಲ ವಾರ್ತೆ ಬೆಂಗಳೂರು, ಅ.05:
ವಿದ್ಯುತ್ ಸಂಪರ್ಕಕ್ಕೆೆ ಅನುಮತಿ (ಎನ್ಒಸಿ) ನೀಡಲು ಲಂಚ ಪಡೆಯುತ್ತಿಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
50 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಜ್ಯೋೋತಿ ಪ್ರಕಾಶ್ ಹಾಗೂ ಅವರ ಕಾರು ಚಾಲಕ ನವೀನ್ ಎಂಬಾತನನ್ನು ಬಂಧಿಸಿದ್ದಾರೆ.
ಕೆಪಿಟಿಸಿಎಲ್ನ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿರುವ ಜ್ಯೋೋತಿ ಪ್ರಕಾಶ್ ಅವರು, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿಿದ್ದಾರೆ. ಬ್ಯಾಾಡರಹಳ್ಳಿಿಯ ನಿವಾಸಿಯಾದ ಕೆ.ಎಂ. ಅನಂತರಾಜು ಅವರು ಬಡಾವಣೆ ನಿರ್ಮಾಣ ಕಾಮಗಾರಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆೆ ಎನ್ಒಸಿ ನೀಡಲು ಜ್ಯೋೋತಿ ಪ್ರಕಾಶ್ ಅವರು 1 ಲಕ್ಷ ರೂ. ಲಂಚಕ್ಕೆೆ ಬೇಡಿಕೆಯಿಟ್ಟಿಿದ್ದರು. ಈ ಕುರಿತು ಅನಂತರಾಜು ಅವರು ಲೋಕಾಯುಕ್ತಕ್ಕೆೆ ದೂರು ಸಲ್ಲಿಸಿದ್ದರು.
ಈ ದೂರಿನನ್ವಯ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಎಸ್ಪಿಿ ಶಿವಪ್ರಕಾಶ್ ದೇವರಾಜು ನೇತೃತ್ವದ ತಂಡ ಅನಂತರಾಜು ಅವರಿಂದ 50 ಸಾವಿರ ರೂ. ಸ್ವೀಕರಿಸುತ್ತಿಿದ್ದ ಜ್ಯೋೋತಿ ಪ್ರಕಾಶ್ ಮತ್ತು ಅವರ ಚಾಲಕ ನವೀನ್ನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

