ಸುದ್ದಿಮೂಲ ವಾರ್ತೆ ಬಳ್ಳಾಾರಿ, ಅ.07:
ಬಳ್ಳಾಾರಿ ನಗರದ ವಾಲ್ಮೀಕಿ ವೃತ್ತ(ಎಸ್.ಪಿ ವೃತ್ತ)ದಲ್ಲಿ 1.10 ಕೋಟಿ ರೂ. ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಯು ಖ್ಯಾಾತ ಶಿಲ್ಪಿಿ ಮೈಸೂರಿನ ಅರುಣ್ ಯೋಗಿರಾಜ್ ಅವರ ಹಸ್ತ ವಿನ್ಯಾಾಸದಲ್ಲಿ ಅರಳುತ್ತಿಿದ್ದು, ಮೂರ್ತಿ ಪ್ರತಿಷ್ಠಾಾಪಿಸಿ ವೃತ್ತ ಅಭಿವೃದ್ಧಿಿ ಮಾಡಲಾಗುತ್ತದೆ ಎಂದು ಬಳ್ಳಾಾರಿ ನಗರ ಶಾಸಕ ನಾರಾ ಭರತರೆಡ್ಡಿಿ ಅವರು ತಿಳಿಸಿದ್ದಾಾರೆ.
ಜಿಲ್ಲಾಾಡಳಿತ, ಜಿಲ್ಲಾಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಾಣ ಇಲಾಖೆ ಇವರ ಸಂಯುಕ್ತಾಾಶ್ರಯದಲ್ಲಿ ವಾಲ್ಮೀಕಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋೋತ್ಸವ ಉದ್ಘಾಾಟಿಸಿ ಅವರು ಮಾತನಾಡಿದರು.
ಬಳ್ಳಾಾರಿಯಲ್ಲಿ ಮಹರ್ಷಿ ವಾಲ್ಮೀಕಿ ಶಾಖಾ ಮಠ ಸ್ಥಾಾಪಿಸಲಾಗುವುದು. ಇದಕ್ಕಾಾಗಿ ವೈಯಕ್ತಿಿಕವಾಗಿ ಎರಡು ಎಕರೆ ಭೂಮಿ ನೀಡುತ್ತೇನೆ. ರಾಮಾಯಣ ರೋಮಾಂಚನಕಾರಿ ಗ್ರಂಥ. ಪ್ರತಿಯೊಬ್ಬರು ಒಮ್ಮೆೆಯಾದರೂ ಓದಲೇಬೇಕು ಎಂದರು.
ಡಾ. ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು, ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ದೇಶದಲ್ಲಿಯೇ ಸರ್ವಶ್ರೇೇಷ್ಠ ಗ್ರಂಥವಾಗಿದೆ ಎಂದರು.
ಮೇಯರ್ ಮುಲ್ಲಂಗಿ ನಂದೀಶ್ ಅವರು, ಋಷಿ ಮತ್ತು ಕವಿ ಮಹರ್ಷಿ ವಾಲ್ಮೀಕಿ ಅವರ ಮಹಾಕಾವ್ಯವಾದ ರಾಮಾಯಣದ ಮೂಲಕ ಧರ್ಮಕ್ಕೆೆ ನೀಡಿದ ಅಪ್ರತಿಮ ಕೊಡುಗೆಗಾಗಿ ಅವರನ್ನು ಪೂಜಿಸಲಾಗುತ್ತದೆ. ರಾಮಾಯಣ ಕೃತಿಯಲ್ಲಿನ ಪಾತ್ರಧಾರಿಗಳ ಉತ್ತಮ ಅಂಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದರು.
ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು, ಸತ್ಯವು ಸದಾಚಾರ ಮತ್ತು ಧರ್ಮದ ಅಡಿಪಾಯ. ಧರ್ಮ ಎಂದರೆ ಒಬ್ಬ ವ್ಯಕ್ತಿಿಯು ಇನ್ನೊೊಬ್ಬ ವ್ಯಕ್ತಿಿಯನ್ನು ಗೌರವಿಸುವುದು. ಸತ್ಯವಂತ ಜೀವನವು ಶಾಂತಿ ಮತ್ತು ದೈವಿಕ ಅನುಗ್ರಹಕ್ಕೆೆ ಕಾರಣವಾಗುತ್ತದೆ. ಹಾಗಾಗಿ ಮಹರ್ಷಿ ವಾಲ್ಮೀಕಿಯವರ ಜೀವನದ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದರು.
ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ ವಿಭಾಗದ ಪ್ರಾಾಧ್ಯಾಾಪಕ ಡಾ. ವೀರಭದ್ರಪ್ಪ ತಂಬ್ರಳ್ಳಿಿ ಅವರು ವಿಶೇಷ ಉಪನ್ಯಾಾಸ ನೀಡಿದರು.
2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿಭಾಗದಲ್ಲಿ ಅತ್ಯುತ್ತಮ ಅಂಕಗಳಿಸಿದ ಪರಿಶಿಷ್ಟ ಪಂಗಡ ವಿದ್ಯಾಾರ್ಥಿಗಳನ್ನು ಸನ್ಮಾಾನಿಸಲಾಯಿತು. ಸ್ನಾಾತಕೋತ್ತರ ಪದವಿ ಪಡೆದ ವಿದ್ಯಾಾರ್ಥಿಗಳನ್ನು ಅಭಿನಂದಿಸಲಾಯಿತು. ಕೃಷಿ, ತೋಟಗಾರಿಕೆ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ಸನ್ಮಾಾನಿಸಲಾಯಿತು. ಕಲೆ, ಸಾಹಿತ್ಯ-ಸಂಗೀತ ಕ್ಷೇತ್ರದಲ್ಲಿನ ಪರಿಣಿತರನ್ನು ಅಭಿನಂದಿಸಲಾಯಿತು.
ಜಿಲ್ಲಾಾಡಳಿತದಿಂದ ಪುಷ್ಪನಮನ:
ಜಯಂತಿ ಅಂಗವಾಗಿ ನಗರದ ಎಸ್.ಪಿ ವೃತ್ತದ ಬಳಿಯ ಮತ್ತು ವಾಲ್ಮೀಕಿ ಭವನದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಗೆ ಜಿಲ್ಲಾಾಡಳಿತದಿಂದ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ, ಪುಷ್ಪಾಾರ್ಚನೆಗೈಯ್ಯಲಾಯಿತು.
ಅದ್ದೂರಿ ಮೆರವಣಿಗೆ:
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ಜರುಗಿತು. ನಗರದ ಎಸ್.ಪಿ ವೃತ್ತ(ವಾಲ್ಮೀಕಿ ವೃತ್ತ) ದಲ್ಲಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್ ಅವರು ಬಾವುಟ ತೋರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ನಗರದ ಎಸ್.ಪಿ ವೃತ್ತದಿಂದ ಆರಂಭವಾಗಿ ಕನಕದುರ್ಗಮ್ಮ ದೇವಸ್ಥಾಾನ- ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆೆ- ಹಳೆಯ ಬ್ರೂಸ್ ಪೇಟೆ ಪೊಲೀಸ್ ಠಾಣೆ- ಜೈನ್ ಮಾರ್ಕೆಟ್ ರಸ್ತೆೆ- ಹೆಚ್.ಆರ್.ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಮುಂಭಾಗದಿಂದ ವಾಲ್ಮೀಕಿ ಭವನದ ವೇದಿಕೆ ಕಾರ್ಯಕ್ರಮದವರೆಗೆ ಸಾಗಿಬಂದು ಸಂಪನ್ನಗೊಂಡಿತು.
ಮೆರವಣಿಗೆಯಲ್ಲಿ ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಒಳಗೊಂಡು ಸಾಗಿಬಂದ ಬೆಳ್ಳಿಿರಥ ಪ್ರಮುಖ ಆಕರ್ಷಣೆಯಾಗಿತ್ತು. ರಾಮಾಯಣ ಕಥಾಸಂಗ್ರಹದ ಪಾತ್ರ-ವೇಷಧಾರಿಗಳನ್ನೊೊಳಗೊಂಡ ಕಲಾತಂಡ, ಡೊಳ್ಳು ಕುಣಿತ, ತಾಷೆ ರಾಂಡೋಲ್ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ಮೆರವಣಿಗೆಗೆ ಇನ್ನಷ್ಟು ಮೆರಗು ನೀಡಿದವು.
ಅಂತರ :
ಬಳ್ಳಾಾರಿ ಜಿಲ್ಲಾಾ ವಾಲ್ಮೀಕಿ ವಿದ್ಯಾಾಭಿವೃದ್ಧಿಿ ಸಂಘದ ಅಧ್ಯಕ್ಷರ ಹೆಸರನ್ನು ನಮೂದಿಸದ ಕಾರಣ ಹಾಗೂ ಅನ್ಯ ಜಾತಿಗಳನ್ನು ವಾಲ್ಮೀಕಿ ಮೀಸಲಾತಿ ವ್ಯಾಾಪ್ತಿಿಯಲ್ಲಿ ಸೇರಿಸಲು ಸರ್ಕಾರ ಪ್ರಯತ್ನಿಿಸುತ್ತಿಿರುವ ಕಾರಣ ವಾಲ್ಮೀಕಿ ಸಂಘಟನೆಗಳು ಸರ್ಕಾರದ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ತಮ್ಮ ಆಕ್ರೋೋಶ ವ್ಯಕ್ತಪಡಿಸಿವೆ. ಅಲ್ಲದೇ, ಜಿಲ್ಲಾಾಡಳಿತದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿವೆ.