ಸುದ್ದಿಮೂಲ ವಾರ್ತೆ ಮೈಸೂರು, ಅ.17
ಕೊಟ್ಟ ಮಾತು ತಪ್ಪಿಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಪ್ರತಿ ಜಿಲ್ಲೆಯಲ್ಲಿಯೂ ಉದ್ಯೋೋಗ ಮೇಳ ನಡೆಸಲಾಗುವುದು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಕೌಶಲ್ಯ ಅಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿಿ ನಿಗಮ ಹಾಗೂ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಮತ್ತು ಮಹಾನಗರ ಪಾಲಿಕೆ ಮೈಸೂರು ಇವರ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಮೈಸೂರು ಬೃಹತ್ ಉದ್ಯೋೋಗ ಮೇಳ ಮತ್ತು ಯುವ ಸಮೃದ್ಧಿಿ ಸಮ್ಮೇಳನ’ ಉದ್ಘಾಾಟಿಸಿ ಮಾತನಾಡಿದ ಅವರು, ಮೋದಿಯವರು ವರ್ಷಕ್ಕೆೆ 2 ಕೋಟಿ ಉದ್ಯೋೋಗ ಸೃಷ್ಟಿಿಸುವ ಭರವಸೆ ನೀಡಿ ಮಾತು ತಪ್ಪಿಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋೋಗ ಸೃಷ್ಟಿಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಹೇಳಿದರು.
ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋೋಗ ಮೇಳದಿಂದಾಗಿ 58,892 ಮಂದಿ ಉದ್ಯೋೋಗಾಕಾಂಕ್ಷಿಗಳು ಉದ್ಯೋೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22,819 ಅಭ್ಯರ್ಥಿಗಳ ಹೆಸರನ್ನು ಆದ್ಯತಾ ಪಟ್ಟಿಿ ಮಾಡಲಾಗಿದೆ ಎಂದು ವಿವರಿಸಿದರು.
ಜಿಲ್ಲೆಗಳಲ್ಲಿ ನಡೆದ ಉದ್ಯೋೋಗ ಮೇಳದಲ್ಲಿ 1,20,563 ಅಭ್ಯರ್ಥಿಗಳು ಭಾಗವಹಿಸಿ, 24,391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ. 48,232 ಅಭ್ಯರ್ಥಿಗಳ ಹೆಸರನ್ನು ಆದ್ಯತಾ ಪಟ್ಟಿಿಯಲ್ಲಿ ಇರಿಸಲಾಗಿದ್ದು, ಅವರಿಗೂ ಉದ್ಯೋೋಗ ಸಿಗಲಿದೆ ಎಂದು ಅಂಕಿಸಂಖ್ಯೆೆಗಳನ್ನು ನೀಡಿದರು.
ಹಿಂದಿನ ಸರ್ಕಾರ ಉದ್ಯೋೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28,000 ಉದ್ಯೋೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋೋಗ ಸೃಷ್ಟಿಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆೆಸ್ ಸರ್ಕಾರ ಯಶಸ್ವಿಿಯಾಗಿ ಕಾರ್ಯ ನಿರ್ವಹಿಸುತ್ತಿಿದೆ ಎಂದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಾಭಿವೃದ್ಧಿಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಮಾಜ ಕಲ್ಯಾಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಮತ್ತಿಿತರರು ಹಾಜರಿದ್ದರು.
ಉದ್ಯೋೋಗ ಮೇಳಕ್ಕೆೆ ಹರಿದುಬಂದ ಯುವ ಸಮೂಹ
ಕೌಶಲಾಭಿವೃದ್ಧಿಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ ಅಭಿವೃದ್ಧಿಿ ನಿಗಮ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ನಡೆದ ಬೃಹತ್ ಉದ್ಯೋೋಗ ಮೇಳಕ್ಕೆೆ ಯುವ ಸಮೂಹ ಹೆಚ್ಚಿಿನ ಸಂಖ್ಯೆೆಯಲ್ಲಿ ಬಂದಿದ್ದರು.
220ಕ್ಕೂ ಹೆಚ್ಚು ಕಂಪಪನಿಗಳು ಉದ್ಯೋೋಗ ಮೇಳದಲ್ಲಿ ಭಾಗವಹಿಸಿದ್ದವು. ಆನ್ಲೈನಲ್ಲಿ 40 ಸಾವಿರ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಉದ್ಯೋೋಗ ಮೇಳಕ್ಕೆೆ ಪ್ರವೇಶ ಉಚಿತ ಇತ್ತು. ಯಾವುದೇ ಕನಿಷ್ಠ ವಿದ್ಯಾಾರ್ಹತೆ ವಯಸ್ಸಿಿನ ಮಿತಿ ಇರಲಿಲ್ಲ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಕಂಪನಿಗಳು ಸಂದರ್ಶನ ನಡೆಸಿದವು. ಉದ್ಯೋೋಗ ಆಕಾಂಕ್ಷಿಗಳು, ಉದ್ಯೋೋಗದಾತರ ನೋಂದಣಿಯಿಂದ ಪ್ರಾಾರಂಭಗೊಂಡು ಸಂದರ್ಶನ, ಅಂತಿಮ ಆಯ್ಕೆೆ ಪ್ರಕ್ರಿಿಯೆ ಎಲ್ಲವೂ ಸಂಪೂರ್ಣ ಡಿಜಿಟಲ್ ಪ್ರಕ್ರಿಿಯೆ ಮೂಲಕವೇ ನಡೆಸಲಾಯಿತು.
ಹುಣಸೂರು, ಎಚ್.ಡಿ.ಕೋಟೆ, ನಂಜನಗೂಡು, ಪಿರಿಯಾಪಟ್ಟಣ, ಕೆ.ಆರ್.ನಗರ, ಶ್ರೀರಂಗಪಟ್ಟಣ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಯುವ ಜನರು ಉದ್ಯೋೋಗ ಪಡೆದುಕೊಂಡು ಖುಷಿಯನ್ನು ಹಂಚಿಕೊಂಡರು. ಇಲಾಖೆಯಿಂದಲೇ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆೆ ಮಾಡಲಾಗಿತ್ತು. ವಿಕಲಚೇತನರಿಗೆ ಸಮಸ್ಯೆೆಯಾಗದಂತೆ ಪ್ರತ್ಯೇಕ ನೋಂದಣಿ ಕೇಂದ್ರ, ಸಾರಿಗೆ ಮತ್ತು ಶೌಚಾಲಯದ ವ್ಯವಸ್ಥೆೆ ಕಲ್ಪಿಿಸಲಾಗಿತ್ತು.