ಸುದ್ದಿಮೂಲ ವಾರ್ತೆ ಬೆಂಗಳೂರು,ಅ.18:
ಸಂಘ-ಸಂಸ್ಥೆೆಗಳು ಸರ್ಕಾರಿ, ಆಸ್ತಿಿ ಹಾಗೂ ಜಮೀನಿನಲ್ಲಿ ಚಟುವಟಿಕೆ ನಡೆಸಲು ಸಕ್ಷಮ ಪ್ರಾಾಧಿಕಾರದಿಂದ ಅನುಮತಿ ಪಡೆಯುವುದನ್ನು ಕಡ್ಡಾಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಗುರುವಾರ ನಡೆಸ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆೆಗಳು ತಮ್ಮ ಚಟುವಟಿಕೆ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಾಯಗೊಳಿಸಲು ಒಪ್ಪಿಿಗೆ ನೀಡಲಾಗಿತ್ತು. ಈಗ ನಿಯಮ ರೂಪಿಸಿ ಆದೇಶ ಹೊರಡಿಸಿದೆ.
ರಾಜ್ಯದ ಹಲವಾರು ಖಾಸಗಿ ಸಂಸ್ಥೆೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆ ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು, ಸರ್ಕಾರದ ಆಸ್ತಿಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆೆಗಳು ಇತ್ಯಾಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ತಿಳಿಸಿ ಅನುಮತಿ ಪಡೆಯದೆ . ಅಲ್ಲದೆ ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿಿರುವುದು ಕಂಡು ಬಂದಿದೆ.
ಇಂತಹ ಕ್ರಿಿಯೆಗಳು ಅಕ್ರಮ ಪ್ರವೇಶ ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟು ಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿಿ, ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಿಯಿಂದ ನಿಯಂತ್ರಿಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆೆ, ಸಂಘವು ಆಯಾ ಸಾರ್ವಜನಿಕ ಆಸ್ತಿಿ, ಸ್ಥಳದ ಮಾಲಿಕತ್ವ ಹೊಂದಿದ ಸಕ್ಷಮ ಪ್ರಾಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ.
ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆೆಗಳ ಆವರಣ, ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆೆಗಳ ಮೂಲ ಧ್ಯೇಯಕ್ಕೆೆ, ಧಕ್ಕೆೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು.
ಸರ್ಕಾರಿ ಸ್ವಾಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆೆಗಳ ಆವರಣ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಉದ್ಯಾಾನವನಗಳು, ಆಟದ ಮೈದಾನಗಳು, ಇತರೆ ತೆರದ ಸ್ಥಳಗಳು ನರಾಭಿವೃದ್ಧಿಿ ಇಲಾಖೆ, ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಾರ್ವಜನಿಕ ರಸ್ತೆೆಗಳು, ಸರ್ಕಾರದ ಇತರೆ ಆಸ್ತಿಿಗಳು, ಸ್ಥಳಗಳಿ, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರು ಮೇಲೆ ನಮೂದಿಸಿದ ಇಲಾಖೆ, ಸಕ್ಷಮ ಪ್ರಾಾಧಿಕಾರಗಳು ಇಂತಹ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಎಚ್ಚರಿಕೆ ವಹಿಸಲು ಅನುವಾಗುವಂತೆ ಸೂಕ್ತ ವಿವರವಾದ ಮಾರ್ಗಸೂಚಿಯನ್ನು ಆಯಾ ಇಲಾಖೆಗಳು ಹೊರಡಿಸಬೇಕು ಎಂದು ಸೂಚಿಸಲಾಗಿದೆ.
ನೂರು ವರ್ಷದ ಸಂಭ್ರಮದ ಪಥ ಸಂಚಲನದಲ್ಲಿ ಆರ್ಎಸ್ಎಸ್ಗೆ ಆಘಾತ
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆೆ ನೂರು ವರ್ಷ ಸಂದ ವೇಳೆ ಇತ್ತೀಚೆಗೆ ರಾಜ್ಯದಲ್ಲಿ ಸ್ವಯಂ ಸೇವಕರು ಸಮವಸ ಧರಿಸಿ ಕೈಯಲ್ಲಿ ದೊಣ್ಣೆೆ ಹಿಡಿದು ಪಥ ಸಂಚಲನ ನಡೆಸಿದ್ದರು. ಈ ಬೆನ್ನಲ್ಲೇ ಸಚಿವ ಪ್ರಿಿಯಾಂಕ್ ಖರ್ಗೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸರ್ಕಾರಿ, ಸ್ಥಳ, ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಯನ್ನು ನಿಷೇಧಿಸಬೇಕು. ಒಂದು ವೇಳೆ ನಡೆಸಿದರೆ ಸಕ್ಷಮ ಪ್ರಾಾಧಿಕಾರದಿಂದ ಅನುಮತಿ ಪಡೆಯಬೇಕು ಎಂದು ಪತ್ರ ಬರೆದಿದ್ದರು.
ಇದರ ಬೆನ್ನಲ್ಲೇ ಸಿಎಂ ಸಚಿವ ಸಂಪುಟ ಸಭೆ ಕರೆದು ಪೂರ್ವಾನುಮತಿ ಪಡೆಯಬೇಕು ಎಂದು ಚರ್ಚಿಸಿ ಒಪ್ಪಿಿಗೆ ನೀಡಲಾಗಿತ್ತು.