ಸುದ್ದಿಮೂಲ ವಾರ್ತೆ ಬೆಂಗಳೂರು, ನ.04:
ಬಿಹಾರ ವಿಧಾನಸಭಾ ಚುನಾವಣೆಯ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ದೆಹಲಿ ಭೇಟಿಗೆ ಮುಂದಾಗಿದ್ದರು. ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಅವರ ಭೇಟಿಗೆ ಸಮಯ ಕೇಳಿದರು. ಆದರೆ ಎಲ್ಲಾ ನಾಯಕರು ಬಿಹಾರ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದು ಭೇಟಿಗೆ ಸಮಯವಿಲ್ಲ ಎಂದು ಸಂದೇಶ ರವಾನಿಸಿದ್ದಾರೆ.
ಹೀಗಾಗಿ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳದೆ ಬೆಳಗಾವಿಯಲ್ಲೇ ಉಳಿದಿದ್ದಾರೆ. ಈ ನಡುವೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. 6 ದಿನಗಳ ಅಹೋರಾತ್ರಿಿ, ಧರಣಿ, ಹಿಂಸಾಸ್ವರೂಪ ಪಡೆದುಕೊಳ್ಳುತ್ತಿಿದ್ದು, ಕಾನೂನು ಸುವ್ಯಸ್ಥೆೆಯ ಸವಾಲನ್ನು ತಂದು ಒಡ್ಡಿಿದೆ. ಈ ಕಾರಣಕ್ಕಾಾಗಿ ಸತೀಶ್ ಜಾರಕಿಹೊಳಿ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ ಎನ್ನಲಾಗುತ್ತಿಿದೆ.
ಸಂಪುಟ ಪುನರ್ ರಚನೆಯ ಕುರಿತು ನವೆಂಬರ್ 15ಕ್ಕೆೆ ದೆಹಲಿಗೆ ಭೇಟಿ ನೀಡಿದ ವೇಳೆಯಲ್ಲಿ ವರಿಷ್ಠರ ಜೊತೆಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಸಂಪುಟದಲ್ಲಿ ಸ್ಥಾಾನ ಗಿಟ್ಟಿಿಸಲು ಆಕಾಂಕ್ಷಿಗಳು ದೆಹಲಿ ಯಾತ್ರೆೆ ಆರಂಭಿಸಿದ್ದಾರೆ. ನಾ ಮುಂದು ತಾ ಮುಂದು ಎಂದು ವರಿಷ್ಠರ ಭೇಟಿಗೆ ಸಮಯ ಕೇಳುತ್ತಿಿದ್ದಾರೆ.
ರಾಹುಲ್ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಪ್ರಿಿಯಾಂಕಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಜೈರಾಮ ರಮೇಶ್ ಸೇರಿದಂತೆ ಬಹತೇಕ ನಾಯಕರು ಬಿಹಾರದಲ್ಲೇ ಹೆಚ್ಚು ಸಮಯ ಕಳೆಯುತ್ತಿಿದ್ಧಾಾರೆ. ಹೀಗಾಗಿ ಬಿಹಾರದ ಎರಡನೇ ಹಂತದ ಚುನಾವಣೆ ಮುಗಿಯುವವರೆಗೂ ದೆಹಲಿಗೆ ಬರಬೇಡಿ, ರಾಜಕಾರಣ ಚರ್ಚೆಗೆ ಸಮಯ ಕೇಳಬೇಡಿ ಎಂದು ರಾಜ್ಯದ ನಾಯಕರಿಗೆ ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಲಾಗುತ್ತಿಿದೆ.

