ಸುದ್ದಿಮೂಲ ವಾರ್ತೆ ಬೆಂಗಳೂರು, ನ.04:
ನೂತನ ಕೌಶಲ್ಯ ವಿಶ್ವವಿದ್ಯಾಾಲಯವನ್ನು ಬಳ್ಳಾಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಥಾಾಪಿಸಲಾಗುವುದು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಘೋಷಿಸಿದರು.
ಕೌಶಲ್ಯಾಾಭಿವೃದ್ಧಿಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಿಕೊಳ್ಳಲಾಗಿದ್ದ ಬೆಂಗಳೂರು ಕೌಶಲ್ಯ ಶೃಂಗಸಭೆ ಉದ್ಘಾಾಟಿಸಿ ಮಾತನಾಡಿದರು.
ಕರ್ನಾಟಕ ಪ್ರತಿಭಾನ್ವಿಿತ ಯುವಕರ ದೊಡ್ಡ ದಂಡು ಇದೆ. ನಮ್ಮ ಜನಸಂಖ್ಯೆೆಯ ಶೇ. 60 ಕ್ಕಿಿಂತ ಹೆಚ್ಚು ಜನರು 35 ವಯೋಮಾನದೊಳಗಿದ್ದಾರೆ. ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾಾರೆ. ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿಿತಿ ಮತ್ತು ಆತ್ಮವಿಶ್ವಾಾಸದಿಂದ ಸಜ್ಜುಗೊಳಿಸಿದರೆ ಇದು ಅಸಾಧಾರಣ ಅವಕಾಶ. ಉದ್ಯಾಾನ ನಗರ ಎನ್ನುವ ಹೆಗ್ಗಳಿಕೆಯಿಂದ ಸ್ಟಾಾರ್ಟ್ಅಪ್ ರಾಜಧಾನಿಯಾಗಿ ರೂಪಾಂತರಗೊಂಡಿರುವ ಬೆಂಗಳೂರು ನಗರ ಈಗ ಭಾರತದ ಕೌಶಲ್ಯ ರಾಜಧಾನಿಯಾಗಿರುವುದು ಹೆಮ್ಮೆೆಯ ವಿಷಯ ಎಂದರು.
ಕರ್ನಾಟಕ ಕೌಶಲ್ಯಾಾಭಿವೃದ್ಧಿಿ ನೀತಿ 2025-32
ಕಳೆದ ವರ್ಷದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಕರ್ನಾಟಕ ಕೌಶಲ್ಯಾಾಭಿವೃದ್ಧಿಿ ನೀತಿ 2025-32 ನ್ನು ಇಂದು ಬೆಂಗಳೂರು ಕೌಶಲ ಸಮ್ಮೇಳನ- 2025 ಕಾರ್ಯಕ್ರಮದ ಮೂಲಕ ಕಾರ್ಯರೂಪಕ್ಕೆೆ ತರಲಾಗುತ್ತಿಿದೆ. ಈ 7 ವರ್ಷದ ಕಾರ್ಯತಂತ್ರದ ನೀಲ ನಕ್ಷೆಗೆ 4,432 ಕೋಟಿ ರೂ. ಅನುದಾನದ ಬೆಂಬಲ ನೀಡಲಾಗಿದ್ದು , ಕರ್ನಾಟಕವನ್ನು ಕೌಶಲ್ಯಭರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸನ್ನದ್ಧರಾಗಿಸುವುದು ಹಾಗೂ ಕಾರ್ಮಿಕ ಶಕ್ತಿಿಯ ಜಾಗತಿಕ ಕೇಂದ್ರವನ್ನಾಾಗಿ ರೂಪಿಸುವುದು ನಮ್ಮ ಉದ್ದೇಶ ಎಂದರು.
2032 ಕ್ಕೆೆ ಅಂದಾಜು 30 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ, ಐಟಿಐ ಗಳಲ್ಲಿ ಮಹಿಳೆಯರ ಪ್ರವೇಶವನ್ನು ಶೇ. 33 ಕ್ಕೆೆ ಹೆಚ್ಚಳ ಹಾಗೂ ಐಎಂಸಿಕೆ ಮೂಲಕ ಜಾಗತಿಕ ಉದ್ಯೋೋಗಾವಕಾಶಗಳ ವೃದ್ಧಿಿಯನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ರಾಜ್ಯಾಾದ್ಯಂತ 34 ಮೆಗಾ ಉದ್ಯೋೋಗ ಮೇಳಗಳನ್ನು ಹಮ್ಮಿಿಕೊಂಡಿದ್ದು 1.43 ಲಕ್ಷ ಉದ್ಯೋೋಕಾಂಕ್ಷಿಗಳು ಭಾಗವಹಿಸಿದ್ದಾರೆ. 27, 123 ಜನರಿಗೆ ಉದ್ಯೋೋಗಾವಕಾಶಗಳು ಲಭಿಸಿವೆ. ಬದಲಾಗುತ್ತಿಿರುವ ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಿಯನ್ನು ಪರಿವರ್ತಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಕ್ಸ್
ಜಾಗತಿಕ ಮಟ್ಟಕ್ಕೆೆ ಕಾರ್ಮಿಕ ಶಕ್ತಿಿ
ಜಾಗತಿಕ ಮಟ್ಟಕ್ಕೆೆ ಕಾರ್ಮಿಕ ಶಕ್ತಿಿಯನ್ನು ಸಿದ್ಧಪಡಿಸಲು ಕರ್ನಾಟಕ ಕೌಶಲ ಒಲಂಪಿಕ್ಸ್ ಎಂಬ ಯೋಜನೆಯನ್ನು ಹಮ್ಮಿಿಕೊಳ್ಳಲಾಗಿದೆ. ಕೌಶಲ್ಯ ಸ್ಪರ್ಧೆಯಲ್ಲಿ 48 ಪದಕಗಳನ್ನು ಪಡೆದು ಭಾರತದಲ್ಲಿ ಕರ್ನಾಟಕ ಎರಡನೇ ಸ್ಥಾಾನವನ್ನು ಪಡೆದಿದೆ ಹಾಗೂ 4 ಅಂತರಾಷ್ಟ್ರೀಯ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಐಟಿಐಗಳು ಹಾಗೂ ಜಿಟಿಟಿಸಿಗಳ ಮೂಲಕ ಸುಮಾರು 33,212 ಯುವಕರಿಗೆ ತರಬೇತಿಯನ್ನು ನೀಡಲಾಗಿದ್ದು,. ಶಾಲಾ ಮಕ್ಕಳಿಗೆ ನನ್ನ ವೃತ್ತಿಿ , ನನ್ನ ಆಯ್ಕೆೆ’ ಕಾರ್ಯಕ್ರಮದಡಿ, 35000 ಮಕ್ಕಳಿಗೆ ತರಬೇತಿ ನೀಡಲಾಗಿದೆ. ಈ ವರ್ಷ,ಯೋಜನೆಯನ್ನು 500 ಶಾಲೆಗಳಿಗೆ ವಿಸ್ತರಿಸಿ 2.3 ಲಕ್ಷ ವಿದ್ಯಾಾರ್ಥಿಗಳಿಗೆ ತರಬೇತಿ ನೀಡುವ ಗುರಿಯಿದೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.

