ಸುದ್ದಿಮೂಲ ವಾರ್ತೆ ಬೆಂಗಳೂರು, ನ.08:
ಬಾಕಿ ಇರುವ ನಿಗಮಮಂಡಳಿಗಳಿಗೆ ಮುಂದಿನ ಒಂದು ವಾರದಲ್ಲಿ ನೇಮಕ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕಾಂಗ್ರೆೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಜಂಟಿ ಮಾಧ್ಯಮಗೋಷ್ಠಿಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆೆಸ್ ಸರ್ಕಾರ ಅಧಿಕಾರಕ್ಕೆೆ ಬಂದ ಬಳಿಕ ರಾಜ್ಯದಲ್ಲಿ ಈಗಾಗಲೇ 3 ಸಾವಿರ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 15 ಜನರಿಗೆ ಗ್ಯಾಾರಂಟಿ ಸಮಿತಿ ಜವಾಬ್ದಾಾರಿ ನೀಡಿದ್ದೇವೆ. ಪ್ರತಿ ಕ್ಷೇತ್ರಗಳಲ್ಲಿ 60 ಜನರನ್ನು ನಾಮನಿರ್ದೇಶನ ಮಾಡಿದ್ದೇವೆ. ರಾಜ್ಯ ಮಟ್ಟದಲ್ಲಿ ನಿಗಮ ಮಂಡಳಿಗಳಲ್ಲಿ 600 ಸ್ಥಾಾನಗಳಿವೆ. ಇವುಗಳನ್ನು ಇನ್ನೊೊಂದು ವಾರದಲ್ಲಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.
ಸಹಿ ಸಂಗ್ರಹ ಯಶಸ್ವಿಿ : ಮತಗಳ್ಳನತದ ವಿರುದ್ಧ ಕಾಂಗ್ರೆೆಸ್ ದೇಶದಾದ್ಯಂತ ಅಭಿಯಾನ ನಡೆಸುತ್ತಿಿದ್ದು, ಕರ್ನಾಟಕ ಕಾಂಗ್ರೆೆಸ್ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಿ 1,12, 40,000 ಸಹಿಗಳನ್ನು ಸಂಗ್ರಹಿಸಲಾಗಿದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಿದ್ದೇವೆ ಎಂದು ತಿಳಿಸಿದರು.
ಈ ಸಹಿ ಸಂಗ್ರಹದ ಅರ್ಜಿಗಳನ್ನು ಇದೇ ತಿಂಗಳು 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದಲ್ಲಿ ಹೆಚ್ಚಿಿನ ಜವಾಬ್ದಾಾರಿಯಿಂದ ಕೆಲಸ ಮಾಡಿರುವ ಜಿಲ್ಲಾಧ್ಯಕ್ಷರ ಜೊತೆ ವಿಮಾನದಲ್ಲಿ ಈ ಸಹಿ ಸಂಗ್ರಹಿಸಿರುವ ಅರ್ಜಿಗಳನ್ನು ದೆಹಲಿಗೆ ತಲುಪಿಸಲಾಗುವುದು. ನವೆಂಬರ್ ಮೂರನೇ ವಾರದಲ್ಲಿ (ನ.25) ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಮಾಡಲು ಚಿಂತನೆ ನಡೆಸಲಾಗಿದೆ. ಈ ಅಭಿಯಾನವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಎಲ್ಲಿ ಅಭಿಯಾನ ಆಗಿಲ್ಲ, ಆ ಪ್ರದೇಶಗಳಲ್ಲಿ ಇನ್ನು ಮೂರ್ನಾಲ್ಕು ದಿನ ಕಾಲಾವಕಾಶ ನೀಡಿ ಮುಂದುವರೆಸಲು ಸೂಚಿಸಲಾಗುವುದು ಎಂದು ತಿಳಿಸಿದರು.
ಮತಪತ್ರದ ಮೂಲಕ ಪಾಲಿಕೆ ಚುನಾವಣೆ : ಚುನಾವಣಾ ಅಕ್ರಮದ ತನಿಖೆಗೆ ಪೂರಕ ದಾಖಲೆ ನೀಡಿ ಎಂದು ಮಾಹಿತಿ ಕೇಳಿದರೆ, ಆಯೋಗವೇ ನಮ್ಮ ಬಳಿ ಸಾಕ್ಷಿ ಕೇಳುತ್ತಿಿದೆ. ಹೀಗಾಗಿ ಪಾಲಿಕೆ ಚುನಾವಣೆಗಳನ್ನು ಮತಪತ್ರಗಳ ಮೂಲಕ ನಡೆಸಲು ಚಿಂತನೆ ನಡೆಸಿದ್ದೇವೆ. ಈ ಅಭಿಯಾನವನ್ನು ಯಶಸ್ವಿಿಯಾಗಿ ನಡೆಸಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾಾನದಲ್ಲಿದೆ ಎಂದು ಎಐಸಿಸಿ ಅವರು ತಿಳಿಸಿದ್ದು, ಇದರ ಯಶಸ್ಸು ಬಿಎಲ್ಎಗಳು, ಬ್ಲಾಾಕ್ ಹಾಗೂ ಜಿಲ್ಲಾ ಕಾಂಗ್ರೆೆಸ್ ಅಧ್ಯಕ್ಷರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳದ್ದಾಗಿದೆ. ಈ ಹೋರಾಟ ಹಮ್ಮಿಿಕೊಂಡಿರುವ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಿ, ಮತದಾನದ ಹಕ್ಕು ಕಾಪಾಡಲು ಸಹಿ ಸಂಗ್ರಹದ ಮೂಲಕ ಬೃಹತ್ ಆಂದೋಲನ ನಡೆಸಲಾಗುತ್ತಿಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾನದ ಅಧ್ಯಯನ ಮಾಡಿ ಅಲ್ಲಿ ನಡೆದಿರುವ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಒಂದೇ ಮನೆಯಲ್ಲಿ 80ಕ್ಕೂ ಹೆಚ್ಚು ಮತಗಳನ್ನು ಸೇರಿಸಲಾಗಿತ್ತು. ಒಂದು ಬಾರ್ನಲ್ಲಿ 70-80 ಮತದಾರರಿರುವುದನ್ನು ದಾಖಲೆ ಸಮೇತ ಬಹಿರಂಗ ಪಡಿಸಿ ರಾಹುಲ್ ಗಾಂಧಿ ಅವರು ದೇಶದ ಗಮನ ಸೆಳೆದಿದ್ದಾರೆ ಎಂದು ತಿಳಿಸಿದರು.
ಆಳಂದ: ತನಿಖೆಯ ವರದಿ ಶೀಘ್ರ : ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನದ ವಿಚಾರವಾಗಿ ಎಸ್ಐಟಿ ತನಿಖೆ ನಡೆಯುತ್ತಿಿದ್ದು, ಶೀಘ್ರದಲ್ಲಿಯೇ ವರದಿ ಬರಲಿದೆ ಎಂದು ಡಿಸಿಎಂ ಹೇಳಿದರು.
ಈ ತನಿಖೆ ಮೂಲಕ ಹೊರ ರಾಜ್ಯದವರು ಹಾಗೂ ಅವರ ದೂರವಾಣಿ ಸಂಖ್ಯೆೆ ಮೂಲಕ ಮತಗಳನ್ನು ತೆಗೆಸಲು ಷಡ್ಯಂತ್ರ ಮಾಡಲಾಗಿತ್ತು ಎಂದರು.
ಬಿಹಾರ ಚುನಾವಣೆಯಲ್ಲಿ ನಮ್ಮ ನಾಯಕರು ಅತ್ಯುತ್ತಮವಾಗಿ ಶ್ರಮಿಸಿದ್ದಾರೆ. ನಮಗೆ ಬಿಹಾರ ಜನತೆ ಮೇಲೆ ನಂಬಿಕೆ ಇದೆ. ಬದಲಾವಣೆ ಬಯಸಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ರಕ್ಷಣೆಗಾಗಿ ಬಿಹಾರದ ಜನ ನಮಗೆ ಸಂಪೂರ್ಣ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾಾಸ ನಮಗಿದೆ ಎಂದು ತಿಳಿಸಿದರು.
ರಾಜ್ಯ ಮತದಾರರ ಪಟ್ಟಿಿ ಬಳಕೆ : ಈ ಅಕ್ರಮ ಮುಚ್ಚಿಿಹಾಕಲು ಆಯೋಗವು ಪರಿಷ್ಕರಣೆಗೆ ಮುಂದಾಗಿದೆಯೇ ಎಂದು ಕೇಳಿದಾಗ, ನಾವು ಈ ಆರೋಪ ಬಹಿರಂಗಗೊಳಿಸಿದ ಬಳಿಕ ಆಯೋಗ ಪರಿಷ್ಕರಣೆಗೆ ಮುಂದಾಗಿದ್ದು ಯಾಕೆ? ನಾವು ಈ ವಿಚಾರದಲ್ಲಿ ಹೋರಾಟ ಆರಂಭಿಸಿದ ಕಾರಣಕ್ಕೆೆ ಮಾಡುತ್ತಿಿದ್ದಾರೆ. ಮುಂದೆ ತಮ್ಮ ತಪ್ಪುು ಎಲ್ಲಿ ಸಾಬೀತಾಗುತ್ತದೆಯೋ ಎಂದು ಈ ರೀತಿ ಮಾಡುತ್ತಿಿದ್ದಾರೆ. ಹೀಗಾಗಿ ಸ್ಥಳೀಯ ಸಂಸ್ಥೆೆ ಚುನಾವಣೆಯಲ್ಲಿ ಕೇಂದ್ರ ಆಯೋಗದ ಮತಪಟ್ಟಿಿ ಬದಲು ನಮ್ಮ ರಾಜ್ಯ ಚುನಾವಣಾ ಆಯೋಗದ ಪ್ರತ್ಯೇಕ ಮತದಾರರ ಪಟ್ಟಿಿಯನ್ನು ಬಳಸಲು ತೀರ್ಮಾನಿಸಿದೆ. ಆಗ ಎಷ್ಟು ಮತಗಳ ಅಕ್ರಮ ನಡೆದಿದೆ ಎಂದು ಸಾಬೀತಾಗುತ್ತದೆ ಎಂದರು.
ಮಹದೇವಪುರ ಕ್ಷೇತ್ರದಲ್ಲಿನ ಅಕ್ರಮದ ಬಗ್ಗೆೆ ತನಿಖೆ ಮಾಡಿಸುತ್ತೀರಾ ಎಂಬ ಪ್ರಶ್ನೆೆಗೆ, ಈ ತನಿಖೆಯನ್ನು ಸರ್ಕಾರವೇ ಮಾಡಬೇಕಿಲ್ಲ. ಚುನಾವಣೆ ಪ್ರಕ್ರಿಿಯೆ ವೇಳೆ ಸಂಪೂರ್ಣ ನಿಯಂತ್ರಣ ಚುನಾವಣಾ ಆಯೋಗದ ಕೈಯಲ್ಲಿರುತ್ತದೆ. ಹೀಗಾಗಿ ರಾಜಕೀಯ ಪಕ್ಷವಾಗಿ ನಾವೇ ತನಿಖೆ ಮಾಡಿ ಅಕ್ರಮಗಳನ್ನು ದಾಖಲೆ ಸಮೇತ ಬಹಿರಂಗಪಡಿಸಿದ್ದೇವೆ. ಮಾಧ್ಯಮಗಳು ಕೂಡ ತನಿಖೆ ಮಾಡಿ ಈ ಆರೋಪ ನಿಜ ಎಂದು ವರದಿ ಮಾಡಿವೆ ಎಂದು ತಿಳಿಸಿದರು.

