ಸುದ್ದಿಮೂಲ ವಾರ್ತೆ ಬೆಂಗಳೂರು, ನ.09:
ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಕೇವಲ ನೂರು ರೂಪಾಯಿ ದರ ಹೆಚ್ಚಳ ಮಾಡಿರುವುದಕ್ಕೆೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ಕಬ್ಬಿಿಗೆ ಪ್ರತಿ ಟನ್ಗೆೆ 3 ಸಾವಿರದ 550 ರೂಪಾಯಿಗಳನ ಎ್ಆರ್ಪಿ ದರವನ್ನು ನಿಗದಿ ಮಾಡಿದೆ. ಹಾಗಾಗಿಯೇ ಕಬ್ಬು ಬೆಳೆಗಾರರು ಪ್ರತಿ ಟನ್ ಗೆ ಕನಿಷ್ಠ 3 ಸಾವಿರದ 500 ರೂಪಾಯಿಗಳನ್ನು ಕೊಡುವಂತೆ ಆಗ್ರಹಿಸಿದ್ದರು. ಆದರೆ ರಾಜ್ಯ ಸರ್ಕಾರ ಕೇವಲ 3 ಸಾವಿರದ 300 ರೂಪಾಯಿಗಳನ್ನು ನಿಗದಿ ಮಾಡಿ, ಕಬ್ಬು ಬೆಳೆಗಾರರಿಗೆ ಅನ್ಯಾಾಯ ಮಾಡಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ, ಅನಗತ್ಯವಾಗಿ ಕೇಂದ್ರ ಸರ್ಕಾರದ ಬಗ್ಗೆೆ ಆಕ್ಷೇಪ ವ್ಯಕ್ತಪಡಿಸುತ್ತಿಿದ್ದು, ರೈತರಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಿಸುತ್ತಿಿದ್ದಾರೆ. ಕಬ್ಬು ಬೆಳೆಗಾರರು ರಾಜ್ಯ ಸರ್ಕಾರ ಮಾಡುತ್ತಿಿರುವ ಮೋಸದ ಬಗ್ಗೆೆ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

