ಸುದ್ದಿಮೂಲ ವಾರ್ತೆ ಬೆಂಗಳೂರು, ನ.09:
ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆೆ ತಿಳಿಸಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಮೃತ ವ್ಯಕ್ತಿಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿಎನ್ಎ ಎರಡನ್ನೂ ಪರಿಶೀಲಿಸಿ, ಸೆರೆ ಹಿಡಿಯಲಾದ ಹುಲಿ ಹೆಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಬಂಡಿಪುರ ಮತ್ತು ನಾಗರಹೊಳೆಯ ಅರಣ್ಯದಂಚಿನಲ್ಲಿ ಹುಲಿಗಳು ಮನುಷ್ಯರ ಮೇಲೆ ಮತ್ತು ಜಾನುವಾರಗಳ ಮೇಲೆ ದಾಳಿ ಮಾಡುವ ಪ್ರಕರಣಗಳು ಹೆಚ್ಚಾಾಗಿದೆ. ಈ ಹಿನ್ನೆೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆಯ ಸಾರಿ ಸ್ಥಗಿತಗೊಳಿಸಿ, ಅಲ್ಲಿನ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಬಂಡಿಪುರ ಮತ್ತು ನಾಗರಹೊಳೆಯ ವಿವಿಧ ವಲಯಗಳ ಅಧಿಕಾರಿಗಳ ಜೊತೆಗೆ ಇತರ ವಲಯಗಳ ಅಧಿಕಾರಿ ಮತ್ತು ಸಿಬ್ಬಂದಿಯೂ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಹುಲಿ ಹಿಡಿದಿದ್ದಾರೆ. ಈ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಭೇಟೆ ಆಡಲು ಅಶಕ್ತವಾಗಿದ್ದ ಈ ಗಂಡು ಹುಲಿ, ಪಕ್ಕದ ಗ್ರಾಾಮಗಳಿಗೆ ನುಗ್ಗಿಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಈಶ್ವರ ಖಂಡ್ರೆೆ ವಿವರಿಸಿದ್ದಾರೆ.
ವನ್ಯಜೀವಿ ವಿಭಾಗದ ಎ.ಪಿ.ಸಿ.ಸಿ.ಎ್ ಮತ್ತು ಹುಲಿ ಯೋಜನೆಯ ನಿರ್ದೇಶಕರಿಗೆ ವಸತಿ ಪ್ರದೇಶಗಳ ಬಳಿ ಹುಲಿಗಳ ಸಂಚಾರ ಇರುವ ಸ್ಥಳದಲ್ಲಿಯೇ ಮೊಕ್ಕಾಾಂ ಹೂಡಿ, ಈ ಹುಲಿಯಲ್ಲದೆ ಬೇರೆ ಯಾವುದಾದರೂ ಹುಲಿಗಳು ಜನ, ಜಾನುವಾರಗಳ ಮೇಲೆ ದಾಳಿ ಮಾಡಿದೆಯೇ ಎಂಬ ಪರಿಶೀಲನೆ ಮಾಡಿ ಕಾರ್ಯಾಚರಣೆ ನಡೆಸಲು ಸೂಚಿಸಿರುವುದಾಗಿಯೂ ಹೇಳಿದ್ದಾರೆ.
ಬಾಕ್ಸ್
ಒಂದೇ ತಿಂಗಳಲ್ಲಿ ಮೂವರು ಬಲಿ
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇತ್ತೀಚೆಗೆ, ಸರಗೂರು ಬಡಗಲಪುರ ಗ್ರಾಾಮದಲ್ಲಿ ಮಹದೇವ (ಮಾದೇಗೌಡ) ಎಂಬುವರು ಹುಲಿ ದಾಳಿಯಿಂದ ಕಣ್ಣುಗಳನ್ನು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿಿದ್ದಾರೆ. ಈ ಘಟನೆಯ ಬಳಿಕ ಬಣ್ಣೆೆಗೆರೆ ಗ್ರಾಾಮದ ರಾಜಶೇಖರ್ ಹಾಗೂ ಕುರ್ಣೇಗಾಲ ಗ್ರಾಾಮದ ದೊಡ್ಡನಿಂಗಯ್ಯ ಮತ್ತು ಹೆಗ್ಗುಡಿಲು ಗ್ರಾಾಮದ ಚೌಡನಾಯಕ ಎಂಬ ರೈತ ಹುಲಿ ದಾಳಿಯಲ್ಲಿ ಮೃತಪಟ್ಟಿಿದ್ದಾನೆ. ಈ ಮೂಲಕ ಹುಲಿ ದಾಳಿಗೆ ಮೂವರು ಪ್ರಾಾಣ ಕಳೆದುಕೊಂಡಂತಾಗಿದೆ.

