ಸುದ್ದಿಮೂಲ ವಾರ್ತೆ ನವದೆಹಲಿ, ನ.13:
ಸರಕು ಸಾಗಣೆಯನ್ನು ಉತ್ತೇಜಿಸಲು ಮತ್ತು ಉದ್ಯೋೋಗ ಸೃಷ್ಟಿಿಗೆ ಅನುಕೂಲವಾಗಲು ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅನುಷ್ಠಾಾನಗೊಳಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಶ್ ಗೋಯಲ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.
ಗುರುವಾರ ವಾಣಿಜ್ಯ ಸಚಿವಾಲಯದ ಕಚೇರಿಗೆ ತೆರಳಿ ಸಚಿವ ಗೋಯಲ್ ಅವರನ್ನು ಭೇಟಿಯಾದ ಕುಮಾರಸ್ವಾಾಮಿ ಅವರು; ಈ ಯೋಜನೆ ಕುರಿತ ಮನವಿಯನ್ನು ಸಲ್ಲಿಸಿ ರಾಜ್ಯದ ಕೈಗಾರಿಕಾಭಿವೃದ್ಧಿಿ ಬಗ್ಗೆೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು.
ಕರ್ನಾಟಕದ ಎಲ್ಲಾ ಜಿಲ್ಲೆಗಳನ್ನು ಸಂಪರ್ಕಿಸುವುದಕ್ಕೆೆ ಪೂರಕವಾದಂತಹ ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ, ಬಹುವ್ಯಾಾಪ್ತಿಿಯುಳ್ಳ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಿ ಯೋಜನೆಯನ್ನು ಅನುಷ್ಠಾಾನ ಮಾಡಬೇಕೆಂದು ಕೋರಿ ಗೋಯಲ್ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆೆ ಎಂದೇ ನಂಬಲಾಗಿರುವ ಒಂಭತ್ತು ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಿ ಯೋಜನೆಯನ್ನು ಅನುಷ್ಠಾಾನಗೊಳಿಸಬೇಕು. ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಾಪಿಸುವ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಈ ಪ್ರಸ್ತಾಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಿ ಕಾರ್ಯಕ್ರಮ ಚೌಕಟ್ಟಿಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋೋಗ ಸೃಷ್ಟಿಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಕೆಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಉಕ್ಕು ಸಚಿವರು ಗೋಯಲ್ ಅವರಿಗೆ ವಿವರಿಸಿದರು.
ಈ ಯೋಜನೆ ಅನುಷ್ಠಾಾನಕ್ಕೆೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿಿ ಕಾಣುವುದಲ್ಲದೆ, ಸಮತೋಲಿತ ಪ್ರಾಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಎಂದು ಕುಮಾರಸ್ವಾಾಮಿ ಚರ್ಚೆಯ ವೇಳೆ ಒತ್ತಿಿ ಹೇಳಿದರು.
ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಿಯೆ:
ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಾಮಿ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಈ ಪ್ರಸ್ತಾಾವನೆಯನ್ನು ಮುಕ್ತಕಂಠದಿಂದ ಶ್ಲಾಾಘಿಸಿದರಲ್ಲದೆ, ಯೋಜನೆಯ ಅನುಷ್ಠಾಾನದ ಬಗ್ಗೆೆ ಆಸಕ್ತಿಿ ವ್ಯಕ್ತಪಡಿಸಿದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ಪಾಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಿಕೋನಕ್ಕೆೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಯೋಜನೆಯಿಂದ ರಾಜ್ಯದ ಉತ್ತರ, ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡುವಲ್ಲಿ ಪ್ರಮುಖ ಹೆಜ್ಜೆೆಯಾಗಿದೆ ಎಂಬುದಾಗಿ ಕುಮಾರಸ್ವಾಾಮಿ ತಿಳಿಸಿದರು.
ಪ್ರಸ್ತಾಾವಿತ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋೋಗ ಸೃಷ್ಟಿಿಸುವ, ಪ್ರಾಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಸಚಿವ ಕುಮಾರಸ್ವಾಾಮಿ ವಿವರಿಸಿದರು.
ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿಿ-ಧಾರವಾಡ, ರಾಯಚೂರು, ಬೀದರ್ ಜಿಲ್ಲೆಗಳನ್ನು ಒಳಗೊಂಡ ಯೋಜನೆ ಮನವಿ 9 ಜಿಲ್ಲೆಗಳನ್ನು ಒಳಗೊಂಡ ಕೈಗಾರಿಕಾ ಕಾರಿಡಾರ್ ಸ್ಥಾಾಪನೆಗೆ ಎಚ್ಡಿಕೆ ಪ್ರಸ್ತಾಾಪ

