ಸುದ್ದಿಮೂಲ ವಾರ್ತೆ ಬೆಂಗಳೂರು, ನ.15:
ಬೆಂಗಳೂರಿನಲ್ಲಿ ಸುರಂಗ ರಸ್ತೆೆ ನಿರ್ಮಿಸುವ ಮೂಲಕ ಕಾಂಗ್ರೆೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋೋಶ ಹೊರಹಾಕಿದರು.
ಸ್ಯಾಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆೆಗಾಗಿ ಸ್ಯಾಾಂಕಿ ಕೆರೆಗೆ ಧಕ್ಕೆೆ ತರಲಾಗುತ್ತಿಿದೆ. ನಾವ್ಯಾಾರೂ ಅಭಿವೃದ್ಧಿಿಯ ವಿರೋಧಿಗಳಲ್ಲ. ಆದರೆ ಯಾವುದೇ ಯೋಜನೆಗಳನ್ನು ಕಾಂಗ್ರೆೆಸ್ ಸರ್ಕಾರ ತಂದರೂ ಪರಿಸರವನ್ನು ಹಾಳು ಮಾಡಲು ನೋಡುತ್ತದೆ. ಪರಿಸರ ಇಲಾಖೆ, ಪುರಾತತ್ವ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗಳ ಅನುಮತಿಯನ್ನೂ ಪಡೆದಿಲ್ಲ ಎಂದು ದೂರಿದರು.
ಮೆಟ್ರೋೋ ಯೋಜನೆಯಿಂದಾಗಿ ನಗರದಲ್ಲಿ ಟ್ರಾಾಫಿಕ್ ಕಡಿಮೆಯಾಗಿದೆ. ಲಕ್ಷಾಂತರ ಜನರು ಮೆಟ್ರೊೊ ಬಳಸುತ್ತಿಿದ್ದಾರೆ. ಇದನ್ನೇ ಸುಧಾರಣೆ ಮಾಡಿ ಬೇಗ ಯೋಜನೆ ಪೂರ್ಣಗೊಳಿಸಿದರೆ ಜನರಿಗೆ ಅನುಕೂಲವಾಗುತ್ತದೆ. ಸುರಂಗ ಕೊರೆದರೆ ಉಂಟಾಗುವ ಹೂಳನ್ನು ಎಲ್ಲಿಗೆ ಸಾಗಿಸುತ್ತಾಾರೆ ಎಂಬ ಬಗ್ಗೆೆ ಖಾತರಿಯಿಲ್ಲ. ಕಾಸು ಹೊಡೆಯುವ ಯೋಜನೆ ನಗರಕ್ಕೆೆ ಬೇಕಿಲ್ಲ. ಈಗಾಗಲೇ ಬಿಹಾರ ಚುನಾವಣೆಗೆ ಹಣ ಕಳುಹಿಸಿದ್ದಾರೆ. ಈ ರೀತಿ ಹಣ ಮಾಡಲು ಯೋಜನೆ ಮಾಡಬಾರದು ಎಂದರು.
ತೆರಿಗೆಗಳ ಭಾರದಿಂದ ಬೆಂಗಳೂರಿನ ಜನರಿಗೆ ಚಿತ್ರಹಿಂಸೆಯಾಗಿದೆ. ತ್ಯಾಾಜ್ಯ, ನೀರು ಎಲ್ಲ ದರ ಏರಿಕೆಯಾಗಿದೆ. ಸುರಂಗ ರಸ್ತೆೆ ನಿರ್ಮಾಣವಾದರೆ ಅದಕ್ಕೆೆ 20 ಸಾವಿರ ರೂ. ನಷ್ಟು ಟೋಲ್ ಪಾವತಿಸಬೇಕಾಗುತ್ತದೆ. ಸರ್ಕಾರ ಈ ಬಗ್ಗೆೆ ಚಿಂತನೆ ಮಾಡಲಿ ಎಂದರು.
ಬಿಹಾರದ ಜನರಿಗೆ ಅಪಮಾನ
ಕಾಂಗ್ರೆೆಸ್ ಸೋಲು ಕಂಡಾಗಲೆಲ್ಲ ಮತಗಳ್ಳತನ ಹಾಗೂ ಇವಿಎಂ ಸರಿ ಇಲ್ಲ ಎಂಬ ಆರೋಪ ಬರುತ್ತದೆ. ಬಿಹಾರದಲ್ಲೇ ವೋಟ್ ಚೋರಿ ಬಗ್ಗೆೆ ಅಭಿಯಾನ ಮಾಡಿದ್ದು, ಅದನ್ನು ಮತದಾರರು ತಿರಸ್ಕರಿಸಿದ್ದಾರೆ. ಮತಪಟ್ಟಿಿ ಪರಿಷ್ಕರಣೆ ವೇಳೆ ಅನ್ಯದೇಶಗಳ ಜನರ ಹೆಸರು, ಸತ್ತವರ ಹೆಸರು ರದ್ದಾಗಿದೆ. ವಿಶೇಷ ಪರಿಷ್ಕರಣೆ ಸರಿ ಇಲ್ಲ ಎಂದರೆ ಯಾರೂ ನಂಬಲ್ಲ. ಕಾಂಗ್ರೆೆಸ್ ಎಲ್ಲ ರಾಜ್ಯಗಳಲ್ಲಿ ಮಕಾಡೆ ಮಲಗಿದ್ದು, ಕರ್ನಾಟಕದಲ್ಲೂ ಆಡಳಿತ ಕೊನೆಯಾಗಲಿದೆ. ವೋಟ್ ಚೋರಿ ಎಂದು ಹೇಳಿ ಬಿಹಾರದ ಜನತೆಗೆ ಅಪಮಾನ ಮಾಡುತ್ತಿಿದ್ದಾರೆ. ಕಾಂಗ್ರೆೆಸ್ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು ಎಂದರು.
ಬಿಹಾರದ ಚುನಾವಣೆಯಲ್ಲಿ ಗೆದ್ದಿದ್ದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಅವಕಾಶ ಬರುತ್ತಿಿತ್ತು. ಈಗ ಸಿಎಂ ಸಿದ್ದರಾಮಯ್ಯ ಬಲಿಷ್ಠವಾಗಿದ್ದಾರೆ. ರಾಹುಲ್ ಗಾಂಧಿಯ ಮಾತನ್ನು ಇನ್ನು ಯಾರೂ ಕೇಳುವುದಿಲ್ಲ. ಸಿದ್ದರಾಮಯ್ಯನವರ ಮಾತನ್ನು ರಾಹುಲ್ ಗಾಂಧಿ ಕೇಳಬೇಕಾಗುತ್ತದೆ ಎಂದರು.
ಸುರಂಗ ರಸ್ತೆೆಯಿಂದ ಪರಿಸರ ನಾಶ: ಆರ್. ಅಶೋಕ್

