ಸುದ್ದಿಮೂಲ ವಾರ್ತೆ ಬೆಂಗಳೂರು, ನ.15:
ತುಂಗಭದ್ರಾಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಕೊಡಲು ಸಾಧ್ಯವಾಗದಿದ್ದಲ್ಲಿ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸರ್ಕಾರಕ್ಕೆೆ ಆಗ್ರಹಿಸಿದರು.
ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ರೈತರ ವಿಚಾರದಲ್ಲಿ ಕಾಂಗ್ರೆೆಸ್ ಸರಕಾರ ಚೆಲ್ಲಾಟ ಆಡುತ್ತಿಿದೆ. ಅಲ್ಲದೇ, ಮಲತಾಯಿ ಧೋರಣೆ ಅನುಸರಿಸುತ್ತಿಿದೆ ಎಂದು ಟೀಕಿಸಿದರು.
ತುಂಗಭದ್ರಾಾ ಜಲಾಶಯದ ವ್ಯಾಾಪ್ತಿಿಯ 4 ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೂ ರಾಜ್ಯ ಸರಕಾರ ನೀರನ್ನು ಕೊಡಬೇಕು. ಒಂದು ವೇಳೆ ನೀರು ಬಿಡುಗಡೆ ಮಾಡಲು ಸಾಧ್ಯ ಆಗದೇ ಇದ್ದರೆ ರಾಜ್ಯ ಸರಕಾರವು ಆ ಭಾಗದ ರೈತರಿಗೆ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ತುಂಗಭದ್ರಾಾ ಜಲಾಶಯದ ಅಣೆಕಟ್ಟಿಿನ ಕುರಿತು ಸಾಕಷ್ಟು ಬಾರಿ ಚರ್ಚೆ ಆಗಿದೆ. 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಾಗ ಡಿ.ಕೆ.ಶಿವಕುಮಾರ್ಅವರು, ಆಂಧ್ರ, ತೆಲಂಗಾಣಕ್ಕೆೆ ಕಾಯುವುದಿಲ್ಲ. ರಾಜ್ಯ ಸರಕಾರವೇ ಆ ಜವಾಬ್ದಾಾರಿ ತೆಗೆದುಕೊಳ್ಳಲಿದೆ 32 ಹೊಸ ಕ್ರಸ್ಟ್ ಗೇಟ್ ಅಳವಡಿಸಬೇಕು; ರಾಜ್ಯ ಸರಕಾರ ಹಣ ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ, ಸಮರೋಪಾದಿಯಲ್ಲಿ ನಡೆಯಬೇಕಿದ್ದ ಹೊಸ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ಆಗದೇ ಇರುವುದು ದುರ್ದೈವ ಎಂದರು.
32 ಹೊಸ ಕ್ರಸ್ಟ್ ಗೇಟ್ ಅಳವಡಿಸಲು ಅನುದಾನ ನೀಡದೇ ಕೆಲಸ ಕುಂಟುತ್ತ ಸಾಗಿದೆ. ಸರಕಾರವು ತಕ್ಷಣ ಸ್ಪಂದಿಸಿ ತುಂಗಭದ್ರಾಾ ಜಲಾಶಯದ ವ್ಯಾಾಪ್ತಿಿಯ 4 ಜಿಲ್ಲೆಗಳ ರೈತರ ಎರಡನೇ ಬೆಳೆಗೆ ನೀರನ್ನು ಕೊಡಬೇಕಾಗಿತ್ತು. ಆದರೆ, ಮೊದಲನೇ ಬೆಳೆಗೆ ನೀರು ಹರಿಸುವಿಕೆ ಸರಿಯಾಗಿ ಆಗುತ್ತಿಿಲ್ಲ ಎಂದು ದೂರಿದ ವಿಜಯೇಂದ್ರ, ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆೆಸ್ ಸರಕಾರ ಅಧಿಕಾರಕ್ಕೆೆ ಬಂದಾಗಿನಿಂದ ಉತ್ತರ ಕರ್ನಾಟಕದ ಸಮಸ್ಯೆೆಗಳ ಬಗ್ಗೆೆ ಕಾಳಜಿ ವಹಿಸುತ್ತಿಿಲ್ಲ; ಈ ನಾಡಿನ ರೈತರ ಸಮಸ್ಯೆೆಗಳಿಗೆ ಪರಿಹಾರ ನೀಡುತ್ತಿಿಲ್ಲ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಸರಕಾರದ ಧೋರಣೆ ವಿರುದ್ಧ ಹೋರಾಟ ರೂಪಿಸಲು ಇಂದಿನ ಬಿಜೆಪಿ ಪ್ರಮುಖರ ಸಭೆ ತೀರ್ಮಾನಿಸಿದೆ. ಮೆಕ್ಕೆೆಜೋಳ ಬೆಳೆಯುವ ರೈತರು ಸಂಕಷ್ಟದಲ್ಲಿದ್ದು, ಎಲ್ಲ ತಾಲ್ಲೂಕುಗಳಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ರಾಜ್ಯ ಸರಕಾರವು ತಕ್ಷಣ ಖರೀದಿ ಕೇಂದ್ರಗಳನ್ನು ಪ್ರಾಾರಂಭಿಸಲು ಒತ್ತಾಾಯಿಸಲಿದೆ ಎಂದು ಹೇಳಿದರು.
ಕಾಂಗ್ರೆೆಸ್ ಸರಕಾರ ಬೆಂಗಳೂರಿಗೆ ಸೀಮಿತ :
ಬೆಳೆಹಾನಿಗೆ ಪರಿಹಾರ ಘೋಷಿಸಿ ಒಂದೂವರೆ ತಿಂಗಳಾದರೂ ಪರಿಹಾರ ಕೊಡುವಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿಲ್ಲ. ವೈರಲ್ ಇನ್ಫೆೆಕ್ಷನ್ ಆಗಿ ಭತ್ತದ ಬೆಳೆ ಹಾನಿಗೊಳಗಾಗಿದೆ. ಇವುಗಳನ್ನು ಚರ್ಚಿಸಿದ್ದು, ರಾಜ್ಯ ಸರಕಾರ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಲವಾಗಿದೆ ಎಂದು ಟೀಕಿಸಿದರು. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆೆಸ್ ಸರಕಾರ ಬೆಂಗಳೂರಿಗೆ ಸೀಮಿತವಾಗಿದೆ; ನಾಡಿನ ರೈತರ ಸಮಸ್ಯೆೆಗಳಿಗೆ ಸ್ಪಂದಿಸುತ್ತಿಿಲ್ಲ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿಿ ಬಸವರಾಜ ಬೊಮ್ಮಾಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು ಇವರೆಲ್ಲರ ನೇತೃತ್ವದಲ್ಲಿ ವಿಜಯನಗರ, ಬಳ್ಳಾಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಪಕ್ಷದ ಪ್ರಮುಖರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ರೈತ ಮೋರ್ಚಾದ ಅಧ್ಯಕ್ಷರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ರಾಜ್ಯದ ರೈತರ ಸಮಸ್ಯೆೆಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದೇವೆ ಎಂದರು.
ಮಾಜಿ ಉಪಮುಖ್ಯಮಂತ್ರಿಿ ಮತ್ತು ಸಂಸದ ಗೋವಿಂದ ಕಾರಜೋಳ, ಕೋರ್ ಕಮಿಟಿ ಸದಸ್ಯ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿಿ ಮತ್ತಿಿತರ ಪ್ರಮುಖರು ಪತ್ರಿಿಕಾಗೋಷ್ಠಿಿಯಲ್ಲಿ ಇದ್ದರು.
ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಎರಡು ವರ್ಷ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ಇಂದಿಗೆ ಎರಡು ವರ್ಷಗಳನ್ನು ಯಶಸ್ವಿಿಯಾಗಿ ಪೂರೈಸಿದ್ದು, ಪಕ್ಷದ ಮುಖಂಡರು ಅವರಿಗೆ ಶುಭ ಕೋರಿದರು.
ಬಿಜೆಪಿ ರಾಜ್ಯ ಕಚೇರಿ ಜಗನ್ನಾಾಥ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಗೌರವಿಸಿ ಶುಭ ಕೋರಲಾಯಿತು.
ಮಾಜಿ ಮುಖ್ಯಮಂತ್ರಿಿ ಮತ್ತು ಸಂಸದ ಬಸವರಾಜ ಬೊಮ್ಮಾಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿಿ ಮತ್ತು ಸಂಸದ ಗೋವಿಂದ ಕಾರಜೋಳ, ಕೋರ್ ಕಮಿಟಿ ಸದಸ್ಯ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿಿ ಮತ್ತು ಪಕ್ಷದ ಪ್ರಮುಖರು ಅಧ್ಯಕ್ಷರನ್ನು ಸನ್ಮಾಾನಿಸಿ ಗೌರವಿಸಿ ಶುಭ ಹಾರೈಸಿದರು.
ಬಿಜೆಪಿ ಪ್ರಮುಖರ ಸಭೆಯ ಬಳಿಕ ರಾಜ್ಯಾಾಧ್ಯಕ್ಷ ವಿಜಯೇಂದ್ರ ಆಗ್ರಹ ಎರಡನೇ ಬೆಳೆಗೆ ನೀರು ಕೊಡದಿದ್ದರೆ ಎಕರೆಗೆ 25 ಸಾವಿರ ಪರಿಹಾರ ನೀಡಿ

