ಸುದ್ದಿಮೂಲ ವಾರ್ತೆ ಬೆಂಗಳೂರು, ನ.17:
ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್ಗೆ ಪಂಗನಾಮ ಸಿಗಲಿದೆ. ದೇವಸ್ಥಾಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್ನಲ್ಲಿ ಮುಖ್ಯಮಂತ್ರಿಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆೆಸ್ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವರನ್ನು ಏಕೆ ಭೇಟಿಯಾಗುತ್ತಿಿದ್ದಾರೆ? ಎಂದು ಪ್ರಶ್ನಿಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್ಗೆ ಪಂಗನಾಮ ಸಿಗಲಿದೆ. ದೇವಸ್ಥಾಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದರು.
ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆೆ ಅಧಿಕಾರಿಗಳು ಮುನ್ನೆೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಆರಂಭದಿಂದಲೇ ಉತ್ತರ ಕರ್ನಾಟಕದ ಸಮಸ್ಯೆೆಗಳ ಬಗ್ಗೆೆ ಚರ್ಚೆಯಾಗಬೇಕಿದೆ. ಕಳೆದ ಬಾರಿ ಚರ್ಚೆಯಾದ ಸಮಸ್ಯೆೆಗಳನ್ನು ಪರಿಹರಿಸಲಾಗಿದೆಯೇ ಎಂದು ತಿಳಿಸಬೇಕು. ಕಬ್ಬು ಬೆಳೆಗಾರರ ಸಮಸ್ಯೆೆ, ಕಾನೂನು ಸುವ್ಯವಸ್ಥೆೆ ಬಗ್ಗೆೆ ಚರ್ಚೆ ಮಾಡಲಾಗುವುದು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಾಮಿ ಅವರ ಜೊತೆ ಈ ಬಗ್ಗೆೆ ಮತ್ತೊೊಮ್ಮೆೆ ಚರ್ಚೆ ಮಾಡಲಾಗುವುದು ಎಂದರು.
ಚಾಮರಾಜನಗರದಲ್ಲಿ ರೈತರನ್ನು ಭೇಟಿ ಮಾಡಿದ್ದು, ಬೆಳೆ ಪರಿಹಾರ ಹಾಗೂ ಇತರೆ ಸಮಸ್ಯೆೆಗಳ ಬಗ್ಗೆೆ ಚರ್ಚಿಸಿದ್ದೇನೆ. ಪರಿಹಾರ ನೀಡದೆಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿಿದೆ. ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಭಾಷಣ ಮಾಡುತ್ತಾಾರೆಯೇ ಹೊರತು ಪರಿಹಾರ ನೀಡುವುದಿಲ್ಲ. ಜಿಎಸ್ಟಿಿ ಸಮಿತಿಯ ಸಭೆಗೆ ಹೋಗದೆ, ಸಲಹೆ ನೀಡಬೇಕಾದ ಸಭೆಗೆ ಹೋಗದೆ ಈಗ ಇಲ್ಲಿ ಬಂದು ಆರೋಪ ಮಾಡುತ್ತಾಾರೆ. ಇರುವ ಅವಕಾಶಗಳನ್ನು ಬಳಸಿಕೊಳ್ಳದೆಯೇ ಈಗ ಮಾತಾಡಿ ಪ್ರಯೋಜನವಿಲ್ಲ. ಸಿಎಂ ಸಿದ್ದರಾಮಯ್ಯ ಮನವಿ ಕೊಟ್ಟು ಬಂದು ನಾಟಕವಾಡುತ್ತಿಿದ್ದಾರೆ. ಮನವಿ ಕೊಟ್ಟು ಹೊರಗೆ ಬಂದ ನಂತರ ವಂಚನೆಯಾಗಿದೆ ಎಂದು ಆರೋಪ ಮಾಡುತ್ತಾಾರೆ ಎಂದರು.

