ಸುದ್ದಿಮೂಲ ವಾರ್ತೆ ಬೆಂಗಳೂರು, ನ.17:
ಪ್ರಸಕ್ತ ವರ್ಷಾಂತ್ಯಕ್ಕೆೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆೆಗಳ ವಾರ್ಡ್ವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ವಿಭಾಗೀಯ ಪೀಠವು ನಡೆಸಿತು.
ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ ಮತ್ತು ನಗರಾಭಿವೃದ್ಧಿಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಡಿ.11ಕ್ಕೆೆ ಮುಂದೂಡಿತು.
ಇದಕ್ಕೂ ಮುನ್ನ, ರಾಜ್ಯ ಚುನಾವಣಾ ಆಯೋಗದ ಪರ ವಕೀಲೆ ವೈಶಾಲಿ ಹೆಗ್ಡೆೆ ಅವರು ನಗರ ಸ್ಥಳೀಯ ಸಂಸ್ಥೆೆಗಳ ಅವಧಿಯು ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಮುಗಿಯಲಿದೆ ಎಂದರು.
‘ಗ್ರಾಾಮ ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯೊಂದು ಡಿಸೆಂಬರ್ 11ಕ್ಕೆೆ ನಿಗದಿಯಾಗಿದೆ. ಇದು ನಗರ ಸಭೆ ಮತ್ತು ಪುರಸಭೆಗೆ ಸಂಬಂಧಿಸಿದ್ದಾಗಿದೆ ಎಂದರು. ಮುಂದಿನ ವರ್ಷ ಜನವರಿಯಲ್ಲಿ ಅವಧಿ ಮುಗಿಯಲಿರುವ ರಾಜ್ಯದ 5,950 ಗ್ರಾಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಕೋರಿದೆ. ಇದನ್ನು ಆಲಿಸಿದ ಪೀಠವು ರಾಜ್ಯ ಸರ್ಕಾರಕ್ಕೆೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು ಎಂದು ಸರ್ಕಾರದ ಪರ ವಕೀಲರಾದ ನಿಲೋರ್ ಅಕ್ಬರ್ ಹೇಳಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಜ.27 ಮತ್ತು ಜೂ.26ರಂದು ಅಂತಿಮ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆೆ ಪತ್ರ ಬರೆದಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

