ಸುದ್ದಿಮೂಲ ವಾರ್ತೆ ಬೆಂಗಳೂರು, ನ.18:
ಮೇಕೆದಾಟು ಯೋಜನೆ ಅನುಷ್ಠಾಾನಕ್ಕೆೆ ರಾಜಕೀಯ ಪ್ರತಿಷ್ಠೆೆಯಾಗಿ ತೆಗೆದುಕೊಳ್ಳುವುದು ಬೇಡ. ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿಿ ಹಾಗೂ ಸಂಸದ ಬಸವರಾಜ ಬೊಮ್ಮಾಾಯಿ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇದು ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ. ಇದು 1996ರಿಂದ ಆರಂಭವಾಗಿದ್ದು. ಪವರ್ ಪ್ರಾಾಜೆಕ್ಟ್ ನಿಂದ ಆರಂಭವಾಗಿದ್ದು. ನಾನು ನೀರಾವರಿ ಸಚಿವ ಆಗಿದ್ದಾಗ ಬಹಳಷ್ಟು ಪ್ರದೇಶ ಮುಳುಗಡೆ ಆಗುತ್ತದೆ ಅಂತ ಕೇಳಿಬಂದಿತ್ತು. ಅದನ್ನು ಬದಲಾವಣೆ ಮಾಡಿ ಡಿಪಿಆರ್ ಸಿದ್ದಪಡಿಸಿದ್ದೆವು. ಕಾಂಗ್ರೆೆಸ್ ನವರು ಪಾದಯಾತ್ರೆೆ ಮಾಡದಿದ್ದರೆ ಇಷ್ಟೋೋತ್ತಿಿಗೆ ಯೋಜನೆ ಒಂದು ಹಂತಕ್ಕೆೆ ಬರುತ್ತಿಿತ್ತು.
ಇವರು ಪಾದಯಾತ್ರೆೆ ಮಾಡಿದ್ದರಿಂದ ತಮಿಳುನಾಡಿನವರು ಮಿಸಲೇನಿಯಸ್ ಕೇಸ್ ಹಾಕಿದ್ದಾರೆ. ತಮಿಳುನಾಡು ಕೇಸು ನಿಲ್ಲುವುದಿಲ್ಲ ಎಂದು ನಮಗೆ ಗೊತ್ತಿಿದೆ. ಆದ್ದರಿಂದ ನಾವು ಬಹಳ ಬುದ್ದಿವಂತಿಕೆಯಿಂದ ಎಲ್ಲಾಾ ಹಂತಗಳನ್ನು ಮುಗಿಸಿಕೊಳ್ಳಬೇಕು. ಯಾಕೆಂದರೆ ಈಗ ನಡೆಯುವ ಬೆಳವಣಿಗೆಯಲ್ಲಿ ಏನಾದರೂ ವ್ಯತ್ಯಾಾಸವಾದರೆ ತಮಿಳುನಾಡಿನವರು ಮತ್ತೆೆ ಕೋರ್ಟ್ಗೆ ಹೋಗುತ್ತಾಾರೆ. ಈ ಹಿನ್ನೆೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ಇದನ್ನು ಸಿಡಬ್ಲ್ಯುಸಿಯಲ್ಲಿ ಒಪ್ಪಿಿಗೆ ನೀಡಬೇಕಾದರೆ ಸಿಡಬ್ಲ್ಯುಎಂಎ ದಲ್ಲಿ ಒಪ್ಪಿಿಗೆ ನೀಡಬೇಕಾಗುತ್ತದೆ. ಅನುಮೋದನೆ ಕೊಡುವಾಗ ಎಲ್ಲಿ ನಿಂತಿತ್ತೋೋ, ಅಲ್ಲಿಂದಲೇ ಪ್ರಾಾರಂಭ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಾಸದಲ್ಲಿ ಸೌಹಾರ್ದತೆಯಲ್ಲಿ ಈ ಮಹತ್ವದ ಯೋಜನೆಗೆ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಟೇ ಮಾಡಿದರೆ ರಾಜ್ಯದ ಹಿತಾಸಕ್ತಿಿಗೆ ಧಕ್ಕೆೆಯಾಗುತ್ತದೆ ಎಂದು ಹೇಳಿದರು.
ಮೆಕ್ಕೆೆಜೋಳ ಖರೀದಿ ಆರಂಭಿಸಲಿ :
ಮೆಕ್ಕೆೆಜೋಳವನ್ನು ಕರ್ನಾಟಕದ ಬಹುತೇಕ ಭಾಗದಲ್ಲಿ ಬೆಳೆಯುತ್ತಾಾರೆ. ಕಳೆದ ವರ್ಷ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಿಕ್ ಟನ್ ಬೆಳೆಯಲಾಗಿತ್ತು. ಈ ವರ್ಷ 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಿಕ್ ಟನ್ ಮೆಕ್ಕೆೆಜೋಳ ಬೆಳೆದಿದ್ದಾರೆ. ಸುಮಾರು 2 ಲಕ್ಷ ಹೆರ್ಕ್ಟೇ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಈ ವರ್ಷ ಬೆಳೆದಿರುವ ಬೆಳೆಗೆ ಸರಿಯಾದ ಬೆಲೆ ಸಿಕ್ಕಿಿಲ್ಲ. ಕಳೆದ ವರ್ಷ ಪ್ರತಿ ಕ್ವಿಿಂಟಾಲ್ಗೆ 2 ಸಾವಿರ ರೂ. ಮೇಲೆ ಇತ್ತು. ಈ ವರ್ಷ ಬೆಲೆ ಕುಸಿದು ಪ್ರತಿ ಕ್ವಿಿಂಟಾಲ್ ಗೆ 1400 ರೂ.ಗೆ ಇಳಿದಿದೆ. ಹಾಗಾಗಿ ರೈತರು ಸಂಕಷ್ಟಕ್ಕೆೆ ಸಿಲುಕಿದ್ದಾರೆ. ಮೆಕ್ಕೆೆಜೋಳ19-20 ಜಿಲ್ಲೆಯಲ್ಲಿ ಇದೆ. ಈಗಾಗಲೇ ಕೇಂದ್ರ ಸರ್ಕಾರ 2400 ರೂ. ಎಂಎಸ್ ಪಿ ಮಾಡಿದೆ. ಅದಕ್ಕಿಿಂತ ಹೆಚ್ಚಿಿಗೆ ಬೆಲೆ ನೀಡಿ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.
ಜನರ ಪರ ಕೆಲಸ ಮಾಡಲಿ :
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿರುವ ಕುರಿತು ಕೇಳಿದ ಪ್ರಶ್ನೆೆಗೆ ಪ್ರತಿಕ್ರಿಿಯಿಸಿದ ಅವರು, ಸಿಎಂ ಪ್ರಧಾನಿಯವರನ್ನು ಭೇಟಿ ಮಾಡಿರುವ ಸಂಪೂರ್ಣ ಮಾಹಿತಿ ನೀಡಿದರೆ ನಮ್ಮಿಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರ ಜನರ ಸಮಸ್ಯೆೆಗಳ ಬಗ್ಗೆೆ ಯೋಚಿಸದೆ ಸಂಪುಟ ಪುನಾರಚನೆ, ಸಿಎಂ ಬದಲಾವಣೆಯಲ್ಲಿ ಮುಳುಗಿದೆ ಎನ್ನುವ ಪ್ರಶ್ನೆೆಗೆ ಪ್ರತಿಕ್ರಿಿಯಿಸಿದ ಅವರು, ರಾಜ್ಯ ಸರ್ಕಾರ ಈಗಲಾದರೂ ಪುನರ್ ರಚನೆ, ಸಿಎಂ ಬದಲಾವಣೆ ವಿಚಾರ ಬದಿಗಿಟ್ಟು ಜನರ ಪರ ಕೆಲಸ ಮಾಡಲಿ ಎಂದು ಆಗ್ರಹಿಸಿದರು.

