ಸುದ್ದಿಮೂಲ ವಾರ್ತೆ ಬೆಂಗಳೂರು, ನ.18:
ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ (ನೇಗ್ಲೇರಿಯಾ ೌಲೇರಿ) ಕಾಣಿಸಿಕೊಂಡಿರುವ ಹಿನ್ನೆೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಶಬರಿಮಲೆಗೆ ತೆರಳುವ ಯಾತ್ರಿಿಕರಿಗೆ ಮುನ್ನೆೆಚ್ಚರಿಕೆ ನೀಡಿದೆ.
ಇದಕ್ಕಾಾಗಿ ಇಲಾಖೆ ಸುರಕ್ಷತಾ ಸಲಹಾ ಮಾರ್ಗಸೂಚಿ ಬಿಡುಗಡೆ ಮಾಡಿ ಯಾತ್ರಿಿಕರು ತಪ್ಪದೆ ಅನುಸರಿಸುವಂತೆ ಹೇಳಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಸೇವೆಗಳ ಆಯುಕ್ತರು ಪತ್ರಿಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನೇಗ್ಲೇರಿಯಾ ೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿ ನೀರು ಹಾಗೂ ಮಣ್ಣಿಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳಲ್ಲಿ ಇರುತ್ತದೆ ಎಂದಿದ್ದಾರೆ.
ಈ ಸೋಂಕು ವ್ಯಕ್ತಿಿಯಿಂದ ವ್ಯಕ್ತಿಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ಇದೊಂದು ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊ ಎನ್ಸಲೈಟಿಸ್ ಎನ್ನುವ ಅಪರೂಪದ ಗಂಭೀರ ಮಾರಣಾಂತಿಕ ಖಾಯಿಲೆ ಉಂಟು ಮಾಡುತ್ತದೆ ಎಂದಿದ್ದಾರೆ.
ಯಾತ್ರೆೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾಾನ ಮಾಡುವಾಗ ನೀರು ಮೂಗಿಗೆ ಪ್ರವೇಶಿಸದಂತೆ ಮೂಗಿನ ಕ್ಲಿಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿಿ ಹಿಡಿದು ಮುನ್ನೆೆಚ್ಚರಿಕೆ ವಹಿಸಬೇಕು.
ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವ್ರ ತಲೆನೋವು, ವಾಕರಿಕೆ, ವಾಂತಿ, ಕುತ್ತಿಿಗೆ ಬಿಗಿತ, ಗೊಂದಲ, ಮಾನಸಿಕ ಸ್ಥಿಿತಿಗಳಲ್ಲಿ ಬದಲಾವಣೆ ಆದರೇ ನಿರ್ಲಕ್ಷಿಸದೇ ತುರ್ತು ಆರೈಕೆ ಪಡೆಯಲು ಹತ್ತಿಿರದ ಸರ್ಕಾರಿ ಆಸ್ಪತ್ರೆೆ, ವೈದ್ಯರನ್ನು ಸಂಪರ್ಕಿಸುವಂತೆ ಎಚ್ಚರಿಸಿದೆ.

