ಸುದ್ದಿಮೂಲ ವಾರ್ತೆ ಯಾದಗಿರಿ, ನ.24:
ಅನಧಿಕೃತವಾಗಿ ಹುಕ್ಗಳ ಮೂಲಕ ವಿದ್ಯುತ್ ಕಳ್ಳತನವನ್ನು ತಡೆಯುವ ಮತ್ತು ಹೆಚ್ಚಿಿನ ಲೋಡ್ದಿಂದಾಗಿ ವಿದ್ಯುತ್ ಟ್ರಾಾನ್ಸ್ಾರ್ಮರ್ಗಳ ಗಳು ಸುಟ್ಟು ಹೋಗುವುದನ್ನು ತಡೆಯಲು ಅವಶ್ಯಕ ಕ್ರಮ ಕೈಗೊಳ್ಳುವಂತೆ ರಾಜ್ಯ ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ.ನಿ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ವಿದ್ಯುತ್ನ ಕೊರತೆ ಇಲ್ಲದಿದ್ದರೂ ಸಮರ್ಪಕ ನಿರ್ವಹಣೆ ಅತ್ಯವಶ್ಯಕವಾಗಿದೆ. ಪಂಪ್ ಸೆಟ್ಗಳಿಗಾಗಿ ಹಾಗೂ ಇತರೆ ಅವಶ್ಯಕತೆ ಮತ್ತು ಕೈಗಾರಿಕೆಗಳ ವ್ಯಾಾಪ್ತಿಿಯಲ್ಲಿ ವಿದ್ಯುತ್ ಕಳ್ಳತನ ಆಗದಂತೆ ನಿಗಾವಹಿಸುವಂತೆ ಅವರು ಸೂಚಿಸಿ, ಅಧಿಕ ಲೋಡ್ದಿಂದಾಗಿ ಟ್ರಾಾನ್ಸ್ ಾಮರ್ರ್ಗಳು ಸುಟ್ಟು ಹೋಗದಂತೆ ನೋಡಿಕೊಳ್ಳಲು ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ಸೂಚನೆ ನೀಡಿದರು.
ಈಗಾಗಲೇ ಸ್ಥಾಾಪಿಸಿರುವ ವಿದ್ಯುತ್ ಉಪ ಕೇಂದ್ರ ಗಳ ವ್ಯಾಾಪ್ತಿಿಯಲ್ಲಿ ವಿದ್ಯುತ್ ಲಿಂಕ್ ಲೈನ್ಸ್ ಮಾಡುವ ಕಾರ್ಯ ಆದ್ಯತೆ ಮೇಲೆ ಕೈಗೊಳ್ಳಬೇಕು. ವಿದ್ಯುತ್ ಕೇಂದ್ರವಾರು ಸಂಪೂರ್ಣ ಲಿಂಕ್ ಲೈನ್ ಆಗಿರುವ ಬಗ್ಗೆೆ ಕ.ವಿ.ಪ್ರಸರಣ ನಿಗಮ ಹಾಗೂ ಗು ವಿದ್ಯುತ್ ಸರಬರಾಜು ಕಂ ಅಧಿಕಾರಿಗಳು ಅವಶ್ಯಕ ನಿಗಾವಹಿಸುವಂತೆ ಅವರು ಸೂಚಿಸಿದರು.
ಗಂಗಾ ಕಲ್ಯಾಾಣ ಯೋಜನೆಯಡಿ ಕೊಳವೆಬಾವಿ ಕೊರೆಯಿಸಿರುವ ಕಡೆಗಳಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಿಸಬೇಕು.ವಿಶೇಷವಾಗಿ ತಾಂಡಾ,ದೊಡ್ಡಿಿ ಮತ್ತು ಅರ್ಹರಿಗೆ ವಿದ್ಯುತ್ ಸಂಪರ್ಕ ಕಲ್ಪಿಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಒಂಬತ್ತು ವಿದ್ಯುತ್ ಉಪಕೇಂದ್ರಗಳಾದ ಕೆಂಭಾವಿ ,ಹುಣಸಿಹೊಳೆ, ಕವಳೂರ, ಕಂದಕೂರ,ಅಡಕಲಬಂಡಿ,ವನದುರ್ಗ,ಹಯ್ಯಳ.ಬಿ, ಕೊಡೆಕಲ್,ಗಡ್ಡೆೆಸುಗೂರಗಳ ಜಮೀನಿನ ಹಾಗೂ ಟೆಂಡರ್ ಪ್ರಕ್ರಿಿಯೆ ಬೇಗ ಪೂರ್ಣಗೊಳಿಸಿ ಮಾರ್ಗಸೂಚಿಯನ್ವಯ ಕ್ರಮ ಕೈಗೊಳ್ಳಲು ಸೂಚಿಸಿದರು.
ಯಾದಗಿರಿ ಹಾಗೂ ವಡಗೇರಾಗಳಲ್ಲಿ ವಿದ್ಯುತ್ ಸರ್ಕಲ್ ಕಚೇರಿ ಸ್ಥಾಾಪನೆ, ರಾಜ್ಯದಲ್ಲಿ ಹೊಸದಾಗಿ ನೇಮಕವಾಗುವ ಲೈನ್ಮನ್ಗಳ ಪೈಕಿ ಯಾದಗಿರಿಗೆ ಅವಶ್ಯಕತೆಕಡೆ ಒದಗಿಸುವ ಬಗ್ಗೆೆ ,ಕುಸುಮ-ಬಿ ಯೋಜನೆಯಡಿ ಸೋಲಾರ ಪಂಪ್ಸೆಟ್ಗೆ ಉತ್ತೇಜಿಸುವ ಹಾಗೂ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ವಿದ್ಯುತ್ ಸೌಕರ್ಯಗಳ ಬಗ್ಗೆೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಿರಲು ವಿದ್ಯುತ್ ಪರಿವರ್ತಕಗಳ ದುರಸ್ತಿಿ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು.ಜಿಲ್ಲೆಗೆ ಅವಶ್ಯಕತೆ ಇರುವ ಸಿಬ್ಬಂದಿಗಳ ಕೊರತೆ ನೀಗಿಸಲು ಗುಲ್ಬರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿಿರುವ ಹೆಚ್ಚುವರಿ ಸಸಿಬ್ಬಂದಿಗಳ ಸೇವೆ ಯಾದಗಿರಿ ಗೆ ಬಳಿಸಿಕೊಳ್ಳಬೇಕು ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಂಸದ ಕುಮಾರ ನಾಯಕ, ಶಾಸಕರಾದ ಚೆನ್ನಾಾರೆಡ್ಡಿಿ ಪಾಟೀಲ್ ತುನ್ನೂರ, ವೇಣುಗೋಪಾಲ್ ನಾಯಕ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿ.ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ , ಕೆಪಿಟಿಸಿಎಲ್ ವ್ಯವಸ್ಥಾಾಪಕ ನಿರ್ದೇಶಕ ಪಂಕಜ ಕುಮಾರ ಪಾಂಡೆ, ಜೆಸ್ಕಾಾಂ ಎಮ್ ಡಿ ಕೃಷ್ಣಾಾ ಬಾಜಪೇಯಿ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿ ಧರಣೇಶ್ ಸೇರಿದಂತೆ ವಿದ್ಯುತ್ ಇಲಾಖೆ ಅಧಿಕಾರಿಗಳು ಉಪಸ್ಥಿಿತರಿದ್ದರು.
ಗ್ಯಾಾರಂಟಿ ಯೋಜನೆಗಳ ಕುರಿತು ಕಿರು ಪುಸ್ತಕ ಬಿಡುಗಡೆ
ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಇಂದು ಪಂಚಗ್ಯಾಾರಂಟಿ ಯೋಜನೆಗಳ ಕುರಿತು ಕಿರು ಪುಸ್ತಕ ಬಿಡುಗಡೆಗೊಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದಿರುವ ಈ ಕಿರು ಪುಸ್ತಕವು 2024-25ನೇ ಸಾಲಿನ ರಾಜ್ಯ ಸರ್ಕಾರದ ಮಹಾತ್ವಾಾಕಾಂಕ್ಷಿ ಯೋಜನೆಯಾದ ಶಕ್ತಿಿ ಯೋಜನೆ, ಅನ್ನಭಾಗ್ಯ ಯೋಜನೆ,ಗೃಹ ಜ್ಯೋೋತಿ ಯೋಜನೆ, ಗೃಹ ಲಕ್ಷ್ಮಿಿ ಯೋಜನೆ ಹಾಗೂ ಯುವ ನಿಧಿ ಯೋಜನೆ ಗಳ ಅಂಕಿ ಅಂಶ, ಲಾನುಭವಿ ಗಳ ಅಭಿಪ್ರಾಾಯ ಗಳನ್ನು ಒಳಗೊಂಡಿದೆ.
ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ, ಸಂಸದ ಜಿ ಕುಮಾರನಾಯಕ್, ಶಾಸಕ ಚೆನ್ನಾಾರೆಡ್ಡಿಿ ಪಾಟೀಲ್ ತುನ್ನೂರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿಿತರಿದ್ದರು.

