ಸುದ್ದಿಮೂಲ ವಾರ್ತೆ ಮೈಸೂರು, ನ.24:
ನಾನೇ ಐದು ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿಿತಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಬರಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿಿ ಬಸವರಾಜ ಬೊಮಾಯಿ ಟೀಕಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ರೆಬೆಲಿಯನ್ (ಬಂಡಾಯ) ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ (ರಾಜಿ) ಸಿದ್ದರಾಮಯ್ಯ ನಡುವಿನ ಹೋರಾಟ ಶುರುವಾಗಿದೆ. ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಬಿಟ್ಟುಕೊಡುತ್ತಾಾರೆ. ಸಿದ್ದರಾಮಯ್ಯ ಎಷ್ಟರ ಮಟ್ಟಿಿಗೆ ತಮ್ಮ ಗಟ್ಟಿಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್. ಅವರದ್ದು ಯಾವಾಗಲೂ ಗಟ್ಟಿಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಎಂದು ಕೆಣಕಿದರು.
ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರಾ ಎಂಬುದು ಗೊತ್ತಾಾಗುತ್ತದೆ. ಸಿದ್ದರಾಮಯ್ಯರಂತಹ ವ್ಯಕ್ತಿಿತ್ವಕ್ಕೆೆ ಪ್ರತಿದಿನ ನಾನೇ ಸಿಎಂ ಎಂದು ಹೇಳುವ ದೈನೇಸಿ ಸ್ಥಿಿತಿ ಬರಬಾರದಿತ್ತು. ಬಿಜೆಪಿ ಸರ್ಕಾರದ ಮೇಲೆ ಶೇ. 40 ಕಮಿಷನ್ ಆರೋಪ ಮಾಡಿದ್ದು ಸುಳ್ಳು ಎಂಬುದು ತನಿಖಾ ವರದಿಯಿಂದ ಸಾಬೀತಾಗಿದೆ. ಈಗ ಅವರ ಸರ್ಕಾರದಲ್ಲಿ ಎಷ್ಟೆೆಷ್ಟು ಕಮಿಷನ್ ನಡೆಯುತ್ತಿಿದೆ ಎಂಬುದು ಎಲ್ಲರಿಗೂ ಗೊತ್ತಾಾಗಿದೆ ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅಧಿಕಾರಕ್ಕೆೆ ಬಂದ ದಿನವೇ ಕಾಂಗ್ರೆೆಸ್ ಮನೆಯಲ್ಲಿ ಬಿರುಕು ಶುರುವಾಯಿತು. ಈಗ ಆ ಬಿರುಕು ಮತ್ತಷ್ಟು ಹೆಚ್ಚಾಾಗಿದೆ ಎಂದು ಹೇಳಿದರು.

