ಸುದ್ದಿಮೂಲ ವಾರ್ತೆ ಬಳ್ಳಾರಿ, ನ.26:
ಬಳ್ಳಾಾರಿ ಜಿಲ್ಲೆೆಯು ಕೇವಲ ಗಣಿನಾಡಲ್ಲ, ಕಲೆಗಳ ಬೀಡು. ಕಲಾವಿದರ ನಾಡು ಎಂದು ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅಭಿಪ್ರಯಪಟ್ಟಿಿದ್ದಾಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬುಧವಾರ ಪ್ರಾಾರಂಭವಾದ ಎರಡು ದಿನಗಳ ಜಿಲ್ಲಾಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು.
ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆೆಯ ಕಲಾವಿದರಾದ ಬೆಳಗಲ್ ವೀರಣ್ಣ, ಜೋಳದರಾಶಿ ದೊಡ್ಡನಗೌಡ, ಮನ್ಸೂರ್ ಸುಭದ್ರಮ್ಮ, ಬಳ್ಳಾಾರಿ ರಾಘವ ಸೇರಿದಂತೆ ಇನ್ನೂ ಅನೇಕ ಕಲಾವಿದರು ಜಿಲ್ಲೆೆಗೆ ಅಪಾರವಾದ ಕೊಡುಗೆ ನೀಡಿದ್ದಾಾರೆ. ಎಲ್ಲಾಾ ಪ್ರತಿಭೆಗಳು ತಮ್ಮ ಕಲೆಯನ್ನು ಪ್ರದರ್ಶಿಸಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ರಾಜ್ಯ ಸರ್ಕಾರದಿಂದ ಕಲೆಯನ್ನು ಪ್ರೋೋತ್ಸಾಾಹಿಸಲು ಹಲವು ಯೋಜನೆಗಳಿದ್ದು, ಅದರ ಸದುಪಯೋಗ ಪಡೆದುಕೊಳ್ಳಿಿ ಎಂದು ಹೇಳಿದರು.
ಮಹಾಪೌರರಾದ ಪಿ.ಗಾದೆಪ್ಪ ಅವರು, ಮಕ್ಕಳ ಪ್ರತಿಭೆಯನ್ನು ಗುರುತಿಸಲು ಇಂತಹ ಕಾರ್ಯಕ್ರಮ ಜಿಲ್ಲೆೆಯಲ್ಲಿ ಆಯೋಜಿಸಿರುವುದು ಸಂತೋಷ ತಂದಿದ್ದು, ಪೋಷಕರು ತಮ್ಮ ಮಕ್ಕಳ ಮೇಲೆ ಒತ್ತಡ ಹೇರದೆ ಅವರ ಕಲೆಯನ್ನು ಗುರುತಿಸಿ ಪ್ರೋೋತ್ಸಾಾಹಿಸಬೇಕು ಎಂದರು.
ಜಿಲ್ಲಾಾ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ವೇದಿಕೆಯಲ್ಲಿದ್ದರು. ಸಂವಿಧಾನ ಪೀಠಿಕೆಯ ಪ್ರತಿಜ್ಞಾಾ ವಿಧಿಯನ್ನು ಸ್ವೀಕರಿಸಲಾಯಿತು.
ವಿವಿಧ ಸ್ಪರ್ಧೆಗಳು:
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶಾಸೀಯ ನೃತ್ಯ, ಸುಗಮ ಸಂಗೀತ, ಜಾನಪದ ಗೀತೆಗಳು. ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿಿತ), ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾಾನಿ/ಕರ್ನಾಟಕ ಶಾಸೀಯ ವಾದ್ಯ, ಹಿಂದೂಸ್ಥಾಾನಿ/ಕರ್ನಾಟಕ ಶಾಸೀಯ ಸಂಗೀತ ಸ್ಪರ್ಧೆಗಳನ್ನು ಹಮ್ಮಿಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ಸುಮಾರು 60ಕ್ಕಿಿಂತ ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ತಮ್ಮ ಕಲಾ ಪ್ರದರ್ಶನ ನೀಡಿದರು.
ಹಿರಿಯ ರಂಗಭೂಮಿ ಕಲಾವಿದರಾದ ವೀಣಾ ಕುಮಾರಿ, ಹಿರಿಯ ನೃತ್ಯ ಕಲಾವಿದರಾದ ವನಮಾಲಾ ಕುಲಕರ್ಣಿ, ಜಿಲಾನಿ ಭಾಷಾ, ಚಿತ್ರದುರ್ಗ ಜಿಲ್ಲೆೆಯ ಹಿರಿಯ ಕಲಾವಿದ ತಿಪ್ಪೇಸ್ವಾಾಮಿ, ಹಿರಿಯ ಜಾನಪದ ಗಾಯಕ ಯಲ್ಲನಗೌಡ ಶಂಕರಬಂಡೆ, ಹಿರಿಯ ವಾದಕರಾದ ಶಕುಂತಲಮ್ಮ, ಹಿರಿಯ ಚಿತ್ರ ಕಲಾವಿದ ಜಾಧವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಚೋರನೂರು ಕೊಟ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ತೀರ್ಪುಗಾರರು, ಇಲಾಖೆಯ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾಾರ್ಥಿಗಳು ಉಪಸ್ಥಿಿತರಿದ್ದರು.
ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ ಮುಂಡರಗಿ ನಾಗರಾಜ

