ಸುದ್ದಿಮೂಲ ವಾರ್ತೆ ಬಳ್ಳಾಾರಿ, ನ.27:
ಕೇಂದ್ರ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಚಿಕ್ಕಮಗಳೂರು, ಬೆಳಗಾವಿ, ರಾಯಚೂರು ಮತ್ತು ಚಾಮರಾಜನಗರ ಸೇರಿ ಐದು ಜಿಲ್ಲೆೆಗಳಲ್ಲಿ ನಡೆಸಿರುವ ಸಮೀಕ್ಷೆಯಿಂದ ಶೇ.99 ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳಿಗೆ ವ್ಯಸನಿಗಳಾಗಿ ಮಾನಸಿಕವಾಗಿ ಸದೃಢರಾಗಿ ಖಿನ್ನತೆಗೆ ಒಳಗಾಗಿದ್ದಾಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾಾರೆ.
ಬಿಡಿಎಎ ಸಭಾಂಗಣದಲ್ಲಿ ರೀಡ್ಸ್ ಸಂಸ್ಥೆೆ, ಜಿಲ್ಲಾಾ ಕಾನೂನು ಸೇವಾ ಪ್ರಾಾಧಿಕಾರ, ಜಿಲ್ಲಾಾ ಮಕ್ಕಳ ರಕ್ಷಣಾ ಘಟಕ ಮತ್ತು ಸಿಎಸಿಎಲ್-ಕೆ ಇವರ ಸಂಯುಕ್ತಾಾಶ್ರಯದಲ್ಲಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು ವಿಷಯದ ಕುರಿತು ಗುರುವಾರ ನಡೆದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಾಟಿಸಿ ಅವರು ಮಾತನಾಡಿದರು.
ಮುಂದಿನ 2030 ರೊಳಗೆ ದೇಶದಲ್ಲಿ ಬಾಲ್ಯವಿವಾಹ ಮುಕ್ತ ಭಾರತವನ್ನಾಾಗಿಸಲು ಎಲ್ಲಾಾ ಇಲಾಖೆ, ಸಂಘ-ಸಂಸ್ಥೆೆಗಳು, ಸಾರ್ವಜನಿಕರು ಕೈಜೋಡಿಸಬೇಕು ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಸಚಿವರಾದ ಅನ್ನಪೂರ್ಣದೇವಿ ಅವರು ಕರೆ ನೀಡಿದ್ದಾಾರೆ ಎಂದರು.
ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು, ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಇದ್ದು, ಅಂದರೆ ಸರಿ-ಸುಮಾರು ಪ್ರತಿ ಜಿಲ್ಲೆೆಯಲ್ಲಿ 2,000 ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿಿದ್ದಾಾರೆ. ಆದರೂ ಬಾಲ್ಯವಿವಾಹ, ಪೋಕ್ಸೋೋ ಪ್ರಕರಣಗಳು ಕಂಡುಬರುತ್ತಿಿವೆ. ಈ ಕುರಿತು ಪ್ರತಿಯೊಬ್ಬರೂ ವಿಮರ್ಶೆ ಮಾಡಿಕೊಳ್ಳಬೇಕಿದೆ. ಬಾಲ್ಯವಿವಾಹ, ಪೋಕ್ಸೋೋ ಕಾಯ್ದೆೆಗಳ ಕುರಿತು ಅರಿವು ಹೊಂದಬೇಕಿದೆ. ಸರ್ಕಾರ, ಇಲಾಖೆ ಮತ್ತು ಸ್ವಯಂ ಸೇವಾ ಸಂಸ್ಥೆೆಗಳೊಂದಿಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಹೇಳಿದರು.
ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಹಾಗೂ ರೀಡ್ಸ್ ಸಂಸ್ಥೆೆ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಪ್ರಾಾಸ್ತಾಾವಿಕ ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಕಟಪೂರ್ವ ಅಧ್ಯಕ್ಷ ಹೆಚ್.ಸಿ ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಿಗಳಾಗಿ, ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು ಎಂಬ ವಿಷಯ ಕುರಿತು ವಿಸ್ತಾಾರವಾದ ಮಾಹಿತಿ ನೀಡಿದರು.
ಬಳ್ಳಾಾರಿ ನಗರ ಡಿವೈಎಸ್ಪಿ ಹಾಗೂ ಎಸ್.ಜೆ.ಪಿ.ಯು ಹಿರಿಯ ಮಕ್ಕಳ ಕಲ್ಯಾಾಣ ಪೊಲೀಸ್ ಅಧಿಕಾರಿ ಚಂದ್ರಕಾಂತ ನಂದಾರೆಡ್ಡಿಿ, ಜಿಲ್ಲಾಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾಾದೇವಿ, ರೀಡ್ಸ್ ಸಂಸ್ಥೆೆಯ ಕಾರ್ಯಕಾರಿ ಸಮಿತಿಯ ಸದಸ್ಯ ಹನುಮಂತ ರೆಡ್ಡಿಿ, ಸ್ವಯಂ ಸೇವಾ ಸಂಸ್ಥೆೆಯ ಮುಖ್ಯಸ್ಥ ಸುರೇಶ್ ಸೇರಿದಂತೆ ಸಹಾಯವಾಣಿಯ ಸಂಯೋಜಕರು 1098 ಮತ್ತು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಯುವಕ-ಯುವತಿಯರು, ಸಾರ್ವಜನಿಕರು ಉಪಸ್ಥಿಿತರಿದ್ದರು.
ರೀಡ್ಸ್ ಸಂಸ್ಥೆೆಯ ಸಂಯೋಜಕ ಕೆ.ಎಂ.ತಿಪ್ಪೇಸ್ವಾಾಮಿ ಸ್ವಾಾಗತಿಸಿ, ಕಾರ್ಯಾಗಾರ ನಿರೂಪಿಸಿದರು. ಯೋಜನಾ ವ್ಯವಸ್ಥಾಾಪಕಿ ಕೆ.ಸೀತಾಮಹಾಲಕ್ಷ್ಮಿಿ ವಂದಿಸಿದರು.
ಸಾಮಾಜಿಕ ಜಾಲತಾಣಗಳಿಂದ ಶೇ.99 ರಷ್ಟು ಮಕ್ಕಳಿಗೆ ಮಾನಸಿಕ ಖಿನ್ನತೆ

