ಸುದ್ದಿಮೂಲ ವಾರ್ತೆ ಸಿಂಧನೂರು, ನ.03:
ಅಪ್ರಾಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆೆ ಸಂಬಂಧಿಸಿದಂತೆ 3ನೇ ಅಧಿಕ ಜಿಲ್ಲಾಾ ಮತ್ತು ಸತ್ರ ಪೋಕ್ಸೋೋ ವಿಶೇಷ ನ್ಯಾಾಯಾಲಯದ ನ್ಯಾಾಯಾಧೀಶ ಬಿ.ಬಿ.ಜಕಾತಿ ಅವರು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ರೂ.55 ಸಾವಿರ ದಂಡ ಹಾಗೂ ನೊಂದ ಬಾಲಕಿಗೆ ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ರೂ.7.5 ಲಕ್ಷ ಪರಿಹಾರ ನೀಡಬೇಕು ಎಂದು ಮಂಗಳವಾರ ಆದೇಶ ಹೊರಡಿಸಿದ್ದಾಾರೆ.
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಾಪ್ತಿಿಯಲ್ಲಿ ಸೆಪ್ಟೆೆಂಬರ್ 2023 ರಲ್ಲಿ ಪ್ರಕರಣ ನಡೆದಿತ್ತು. ನಗರದ ನಿವಾಸಿಯಾದ ಅಮೀನಸಾಬ ಮುಕ್ದೂಮ್ಸಾಬ ಕಾಲೇ ಗಾರ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾಾನೆ. ನೊಂದ ಅಪ್ರಾಾಪ್ತ ಬಾಧಿತಳ ತಂದೆ ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ಆರಕ್ಷಕ ನಿರೀಕ್ಷಕ ದುರುಗಪ್ಪ ಅವರು ಆರೋಪಿತನ ವಿರುದ್ಧ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದರು. ನ್ಯಾಾಯಾಲಯ ಸಾಕ್ಷಿ, ಪುರಾವೆಗಳನ್ನು ಪರಿಶೀಲಿಸಿ ಆರೋಪಿಯ ಮೇಲಿನ ಆಪಾದನೆ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದಾಾರೆ.

