ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.02:
ತಾಲೂಕಿನಲ್ಲಿ ಕಾನೂನು ಬಾಹೀರ ಚಟುವಟಿಕೆಗಳು ದಿನದಿಂದ ದಿನಕ್ಕೆೆ ಹೆಚ್ಚುತ್ತಿಿದ್ದು, ಕೂಡಲೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿಿನ ಸೂಚನೆ ನೀಡಿದರು.
ಮಂಗಳವಾರ ತಮ್ಮ ಜನಸ್ಪಂದನಾ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ತಾಲೂಕಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಾದ ಗಾಂಜಾ, ಇಸ್ಪೇಟ್, ಅಕ್ರಮ ಮರಳು ಸಾಗಾಣಿಕೆ ಹಾಗೂ ಮಟ್ಕಾಾ ದಂಧೆಗಳು ಯಥೇಚ್ಛವಾಗಿ ನಡೆಯುತ್ತಿಿವೆ. ತಾಲೂಕಿನ ಕಾನೂನು ಸುವ್ಯವಸ್ಥೆೆ ಸರಿಯಾಗಿದೆ ಎನ್ನುವ ಅನುಮಾನಗಳು ಕಾಡುತ್ತಿಿವೆ. ಅಕ್ರಮ ಚಟುವಟಿಕೆಗಳ ಬಗ್ಗೆೆ ಸಾರ್ವಜನಿಕರು ತಮಗೆ ದೂರವಾಣಿ ಕರೆ ಮಾಡುವ ಮೂಲಕ ಮಾಹಿತಿ ನೀಡುತ್ತಿಿದ್ದಾಾರೆ. ಹಗಲು-ರಾತ್ರಿಿ ಎನ್ನದೇ ಕಾನೂನು ಬಾಹೀರ ಚಟುವಟಿಕೆಗಳು ನಡೆಯುತ್ತಿಿದ್ದರೂ ತಾಲೂಕಾಡಳಿತ ಹಾಗೂ ಪೋಲೀಸ್ ಇಲಾಖೆ ಏನು ಮಾಡುತ್ತಿಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಅಕ್ರಮ ಮರಳು ದಂಧೆಯಲ್ಲಿ ಪೊಲೀಸರ ಪಾಲು ಕುರಿತು ಟಿಪ್ಪರ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ನೇರವಾಗಿ ಆರೋಪ ಮಾಡಿದ್ದಾಾರೆ. ಇದಕ್ಕೆೆ ಏನು ಹೇಳುತ್ತೀರಿ. ಕೂಡಲೇ ಗಾಂಜಾ, ಇಸ್ಪೇಟ್, ಅಕ್ರಮ ಮರಳು ಸಾಗಾಣಿಕೆ ಹಾಗೂ ಮಟ್ಕಾಾ ದಂಧೆಗಳಿಗೆ ಕಡಿವಾಣ ಹಾಕಬೇಕು. ಸೂಚನೆ ನೀಡಿದಾಗಲೂ ಕಟ್ಟುನಿಟ್ಟಿಿನ ಕ್ರಮ ಜರುಗಿಸದಿದ್ದರೆ ನಿಮ್ಮ ವಿರುದ್ದ ಕ್ರಮಕ್ಕೆೆ ಹಿರಿಯ ಅಧಿಕಾರಿಗಳಿಗೆ ಶಿಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿರುವದಾಗಿ ಪತ್ರಿಿಕೆಗೆ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಮಾಹಿತಿ ನೀಡಿದರು.
ತಹಶೀಲ್ದಾಾರ ಅರುಣ ಹೆಚ್.ದೇಸಾಯಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಸಿಂಧನೂರು ಉಪವಿಭಾಗದ ಡಿವೈಎಸ್ಪಿ ಜಿ.ಚಂದ್ರ ಶೇಖರ, ಗ್ರಾಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮೌನೇಶ ರಾಥೋಡ್ ಸೇರಿದಂತೆ ಇತರರು ಇದ್ದರು.
ತಹಶೀಲ್ದಾರ, ಪೊಲೀಸ್ ಅಧಿಕಾರಿಗಳೊಂದಿಗೆ ಎಂಎಲ್ಸಿ ಚರ್ಚೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಸನಗೌಡ ಬಾದರ್ಲಿ ಸೂಚನೆ

