ಸುದ್ದಿಮೂಲ ವಾರ್ತೆ ಬೀದರ್, ಡಿ.06:
ಸಾಮಾಜಿಕ ನ್ಯಾಾಯ, ಸಮಾನತೆ ಸ್ಥಾಾಪನೆಗೆ ಜೀವನವಿಡೀ ಹೋರಾಡಿದರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆೆ ಅವರು ತಿಳಿಸಿದರು.
ಶನಿವಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ನಗರದ ಅಂಬೇರ್ ವೃತ್ತ ಬಳಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಸಮಾಜದ ಪರಿವರ್ತನೆ, ಅನಿಷ್ಟ ಪದ್ಧತಿಗಳ ನಿರ್ಮೂಲನೆ, ಸಾಮಾಜಿಕ ನ್ಯಾಾಯ ಮತ್ತು ಸಮಾನತೆಗಾಗಿ ಹೋರಾಟ ಮಾಡುವುದರ ಮೂಲಕ ಪ್ರಜಾಸತ್ತಾಾತ್ಮಕ ಭಾರತದ ನಿರ್ಮಾಣ ಮಾಡಿದ್ದಾರೆ. ಅವರು ಇಂದು ಭೌತಿಕವಾಗಿ ನಮ್ಮ ಮಧ್ಯೆೆ ಇಲ್ಲದಿದ್ದರೂ, ಅವರ ಆದರ್ಶ ಮತ್ತು ಚಿಂತನೆಗಳು ಯಾವಾಗಲೂ ನಮ್ಮಲ್ಲಿ ಇರುತ್ತವೆ. ಜಗತ್ತಿಿನಲ್ಲೇ ಅತ್ಯಂತ ದೊಡ್ಡ ಲಿಖಿತ ಸಂವಿಧಾನವನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ಕೊಟ್ಟಿಿದ್ದಾರೆ. ಸ್ವಾಾತಂತ್ರ್ಯ ಸಿಕ್ಕಿಿ, ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಆಗಿವೆ. ಈ 75 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಶೈಕ್ಷಣಿಕ, ಆರ್ಥಿಕ, ಔದ್ಯೋೋಗಿಕ, ವೈಜ್ಞಾನಿಕವಾಗಿ ನಾವು ಪ್ರಗತಿ ಕಂಡಿದ್ದೇವೆ. ನಮ್ಮ ಸಂವಿಧಾನದಿಂದ ಪ್ರತಿಯೊಬ್ಬ ಪ್ರಜೆಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಿಗೂ ಸ್ವಾಾತಂತ್ರ್ಯ, ಮೂಲಭೂತ ಹಕ್ಕುಗಳು, ವ್ಯಕ್ತಿಿ ಗೌರವ, ನ್ಯಾಾಯ ದೊರೆಯುವಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ ನಗರಾಭಿವೃದ್ಧಿಿ ಪ್ರಾಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿಿ, ಜಿಲ್ಲಾಧಿಕಾರಿ ಶಿಲ್ಪಾಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಸೂರ್ಯಕಾಂತ ನಾಗಮಾರಪಳ್ಳಿಿ, ಅನೀಲಕುಮಾರ ಬೆಲ್ದಾಾರ, ಬಾಬಾ ಪಾಸ್ವಾಾನ್, ಈಶ್ವರ ಸಿಂಗ್ ಠಾಕೂರ್, ಪಂಡಿತ್ ಚಿದ್ರಿಿ, ಹಣಮಂತ ಮಲ್ಕಾಾಪುರ, ವಿಸ್ಡಮ್ ಸಂಸ್ಥೆೆ ಅಧ್ಯಕ್ಷರಾದ ಎಂ.ಡಿ. ಆಸೀುದ್ದೀನ್ ಸೇರಿದಂತೆ ಇತರೆ ಮುಖಂಡರ, ಗಣ್ಯ ಮಾನ್ಯರು ಹಾಗೂ ಸಂಘ-ಸಂಸ್ಥೆೆಗಳ ಪದಾಧಿಕಾರಿಗಳು ಉಪಸ್ಥಿಿತರಿದ್ದರು.
ಸಾಮಾಜಿಕ ನ್ಯಾಯ, ಸಮಾನತೆ ಸ್ಥಾಪನೆಗಾಗಿ ಜೀವನವಿಡೀ ಹೋರಾಡಿದ ಅಂಬೇಡ್ಕರ್ : ಸಚಿವ ಈಶ್ವರ ಬಿ.ಖಂಡ್ರೆ

